ಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ, ಐವರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ  ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.

ಸೋಮವಾರ ಒಂದೇ ದಿನ ಒಟ್ಟು ಮೂರು ಕಡೆಗಳಲ್ಲಿ ಉಗ್ರರ ಒಳನುಸುಳುವಿಕೆಯನ್ನು ಯೋಧರು ವಿಫಲಗೊಳಿಸಿದ್ದು, ಒಟ್ಟು ಐದು ಮಂದಿ ಉಗ್ರರನ್ನು ಹತ್ಯೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರಾಮಪುರ  ಮತ್ತು ಕುಪ್ವಾರಾ ಜಿಲ್ಲೆಯ ತಂಗಧಾರ್ ವಿಭಾಗ  ಮತ್ತು ಪುಲ್ವಾಮಾದಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಈ ನುಸುಳುವಿಕೆ ಪ್ರಯತ್ನಗಳು ನಡೆದಿದ್ದವು.

ಈ ಪೈಕಿ ರಾಮಪುರದಲ್ಲಿ ಇಬ್ಬರು ಉಗ್ರರು ಯೋಧರ ಗುಂಡುಗಳಿಗೆ ಬಲಿಯಾಗಿದ್ದು, ಅವರ ಬಳಿಯಿಂದ ಎರಡು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು  ರಕ್ಷಣಾ ವಕ್ತಾರರು ತಿಳಿಸಿದರು. ಇದಕ್ಕೂ ಮುನ್ನ ತಂಗಧಾರ್ ವಿಭಾಗದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿದೆ. ಅಂತೆಯೇ ಘಟನಾ  ಸ್ಥಳದಿಂದ ಮೂರು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಸೇನೆಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com