ಬಿಲಾಸ್ ಪುರ್: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಗೆ ಪ್ರಧಾನಿ ನರೇಂದ್ರ ಮೋದಿ ಬಿಲಾಸ್ ಪುರ್ ನಲ್ಲಿ ಇಂದು ಶಿಲಾನ್ಯಾಸ ನೆರವೇರಿಸಿದರು..
ಸುಮಾರು ರೂ. 1350 ಕೋಟಿ ವೆಚ್ಚರದಲ್ಲಿ 750 ಹಾಸಿಗೆಗಳ ಆಸ್ಪತ್ರೆಗೆ ಪ್ರಧಾನಿ ಅಡಿಗಲ್ಲು ಹಾಕಿದ್ದಾರೆ. ಸಾಮಾನ್ಯ ಶುಶ್ರೂಷೆ ಜೊತೆಗೆ, ಪದವಿ ಮತ್ತು ಸ್ನಾತಕೋತ್ತರ ಪದವಿ ವೈದ್ಯಕೀಯ ಶಿಕ್ಷಣವನ್ನು ನೀಡುವ ವೈದ್ಯಕೀಯ ಶಿಕ್ಷಣ ಸಂಸ್ಥೆ ಆಗಿಯೂ ಇದು ಕಾರ್ಯನಿರ್ವಹಿಸುತ್ತದೆ.
ನಿನ್ನೆ ದಿನ ಪ್ರಧಾನಮಂತ್ರಿ ಹಿಮಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದರು.
ಈ ಪ್ರಚಾರ ಕಾರ್ಯದಿಂದ ಪ್ರಧಾನಿ, ರಾಜ್ಜ್ಯದಲ್ಲಿ ತಮ್ಮ ಪ್ರಭಾವವನ್ನು ಬೆಳೆಸುವುದು ಮತ್ತು 2012ರಲ್ಲಿ ಕಳೆದುಕೊಂಡ ಅಧಿಕಾರವನ್ನು ಮರಳಿ ಗಳಿಸಲು ಪ್ರಯತ್ನ ನಡೆಸಿದ್ದರೆ..
ಇದೇ ವೇಳೆ ಪ್ರಧಾನಿ ಮೋದಿ ಉನಾ ದಲ್ಲಿ ಸ್ಥಾಪನೆಗೆ ಉದ್ದೇಶಿಸಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ ಸಹ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಜತೆಗೆ, ಭಾರತೀಯ ಉಕ್ಕು ಪ್ರಾಧಿಕಾರ (ಎಸ್ಎಐಎಲ್) ನ ಉಕ್ಕು ಸಂಸ್ಕರಣಾ ಘಟಕವನ್ನು ಉದ್ಘಾಟಿಸಲು ಅವರು ನಿರ್ಧರಿಸಿದ್ದಾರೆ.