ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ, ಕೇರಳದಲ್ಲಿ ರಾಜಕೀಯ ಹತ್ಯೆಯಾಗುತ್ತಿದೆ: ಯೋಗಿ ಆದಿತ್ಯನಾಥ್
ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಆದರೆ, ಕೇರಳ ರಾಜ್ಯದಲ್ಲಿ ರಾಜಕೀಯ ಹತ್ಯೆಗಳು ಮುಂದುವರೆಯುತ್ತಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ...
ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಕಣ್ಣೂರು: ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಆದರೆ, ಕೇರಳ ರಾಜ್ಯದಲ್ಲಿ ರಾಜಕೀಯ ಹತ್ಯೆಗಳು ಮುಂದುವರೆಯುತ್ತಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ.
ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತವರೂರಿನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಣಕಹಳೆ ಊದಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾ ಅವರ ಜೊತೆ ಕೈಜೋಡಿಸಿದ್ದಾರೆ.
ಸಿಪಿಎಂ ವಿರುದ್ಧ ಹಿಂದುತ್ವ ಶಕ್ತಿಗಳನ್ನು ಧ್ರುವೀಕರಣಗೊಳಿಸುವ ಉದ್ದೇಶದಿಂದ ಬಿಜೆಪಿ ಕೇರಳ ರಾಜ್ಯದಲ್ಲಿ ಜನರಕ್ಷಾ ಯಾತ್ರೆಯನ್ನು ಆಯೋಜಿಸಿದೆ. ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಿಂದ ಮಂಗಳವಾರ ಅಮಿತ್ ಶಾ ಅವರು ಯಾತ್ರೆಯನ್ನು ಆರಂಭಿಸಿದ್ದು, 14 ದಿನಗಳ ಕಾಲ ಈ ಯಾತ್ರೆ ನಡೆಯಲಿದೆ.
ರ್ಯಾಲಿ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಯೋಗಿ ಆದಿತ್ಯನಾಥ್ ಅವರು, ರ್ಯಾಲಿಗಳು ಕೇರಳ, ಪಶ್ಚಿಮ ಬಂಗಾಳ ಹಾಗೂ ತ್ರಿಪುರದಂತಹ ರಾಜ್ಯಗಳಿಗೆ ಕನ್ನಡಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಗಳಿಗೆ ಜಾಗವಿಲ್ಲ, ಕಮ್ಯುನಿಸ್ಟ್ ಸರ್ಕಾರಗಳು ಮೊದಲು ರಾಜಕೀಯ ಹತ್ಯೆಗಳನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.