ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಂಚ್'ನಲ್ಲಿ ನಕರ್'ಕೊಟೆಯ ದಿಗ್ವಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಸಣ್ಣ ಹಾಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಪಾಕಿಸ್ತಾನ ಸೇನೆ ಗಡಿಯಲ್ಲಿ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲದೇ ಇದೆ. ಸೋಮವಾರ ಪ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಅಲ್ಲದೆ, ಐವರು ನಾಗರೀಕರಿಗೆ ಗಾಯಗಳಾಗಿದ್ದವು.