ನವದೆಹಲಿ: ಈ ತಿಂಗಳಾಂತ್ಯಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ.
ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರೆ ಇದೇ 10ರಿಂದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮ ನಿರ್ದೇಶನ ಆರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆಯನ್ನು ಆರಂಭಿಸಲು ಈ ತಿಂಗಳ 10ರ ವೇಳೆಗೆ ನಿರ್ಧರಿಸಲು ಕಾಂಗ್ರೆಸ್ ನ ಕೇಂದ್ರ ಚುನಾವಣಾ ಪ್ರಾಧಿಕಾರ ನಿರ್ಧರಿಸಿದೆ.
ಅಕ್ಟೋಬರ್ 25ರ ವೇಳೆಗೆ ಫಲಿತಾಂಶ ಘೋಷಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ಹೇಳಲಾಗುತ್ತದೆ. ಅದು ರಾಜ್ಯದ ಕೇಂದ್ರ ಕಚೇರಿಯಲ್ಲಿ ಅಥವಾ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಆಗಿರಬಹುದು.