ಅತ್ಯಾಚಾರಿ ಬಾಬಾಗೆ ಜೀವಾವಧಿ ಶಿಕ್ಷೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ಥ ಮಹಿಳೆಯರು

ಎರಡು ಅತ್ಯಾಚಾರ ಪ್ರಕರಣದಲ್ಲಿ ತಲಾ 10 ವರ್ಷದಂತೆ ಒಟ್ಟು 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ....
ಗುರ್ಮೀತ್ ರಾಮ್ ರಹೀಂ ಸಿಂಗ್
ಗುರ್ಮೀತ್ ರಾಮ್ ರಹೀಂ ಸಿಂಗ್
ಚಂಡೀಗಢ: ಎರಡು ಅತ್ಯಾಚಾರ ಪ್ರಕರಣದಲ್ಲಿ ತಲಾ 10 ವರ್ಷದಂತೆ ಒಟ್ಟು 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಿ ಸಂತ್ರಸ್ಥ ಇಬ್ಬರು ಮಹಿಳೆಯರು ಬುಧವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕಳೆದ ಆಗಸ್ಟ್ 28ರಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ಎರಡು ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಇದರಿಂದ ಸಮಾಧಾನಗೊಳ್ಳದ ಸಂತ್ರಸ್ಥ ಮಹಿಳೆಯರು ಅತ್ಯಾಚಾರಿ ಬಾಬಾಗೆ ಇನ್ನು ಹೆಚ್ಚು ಶಿಕ್ಷೆ ವಿಧಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸಂತ್ರಸ್ಥ ಮಹಿಳೆಯರ ಪರ ವಕೀಲ ನವಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೆಂಬಲಿಗರಿಂದ ಪಿತಾಜಿ ಎಂದು ಕರೆಸಿಕೊಳ್ಳುವ ಬಾಬಾರೊಂದಿಗೆ ಸಂತ್ರಸ್ಥ ಮಹಿಳೆಯರು ಭಾವನಾತ್ಮಕ ಮತ್ತು ದೈಹಿಕವಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ಆದರೆ ಡೇರಾ ಮುಖ್ಯಸ್ಥ ಅವರ ನಂಬಿಕೆಗೆ ದ್ರೋಹ ಮಾಡಿದ್ದಲ್ಲದೆ ಧಾರ್ಮಿಕ ಗುರುವಿನ ಸ್ಥಾನವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿರುವುದಾಗಿ ನವಕಿರಣ್ ಸಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com