ಆಗ್ರ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಸಮಾಜವಾದಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅಖಿಲೇಶ್ ಯಾದವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಕಾರ್ಯಕಾರಿಣಿ ಸಭೆಗೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮುಲಾಯಂ ಅನುಪಸ್ಥಿತಿಯಲ್ಲೇ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಅಖಿಲೇಶ್ ಯಾದವ್ ಅವರು ಮುಂದಿನ ಐದು ವರ್ಷಗಳ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಲಿದ್ದು 2019ರ ಲೋಕಸಭೆ ಚುನಾವಣೆ ಹಾಗೂ 2022ರ ವಿಧಾನಸಭಾ ಚುನಾವಣೆಯನ್ನು ಅಖಿಲೇಶ್ ಯಾದವ್ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.