ನವಜಾತ ಶಿಶುಗಳ ಸಾವು ವೈದ್ಯರ ನಿರ್ಲಕ್ಷ್ಯದಿಂದಲ್ಲ: ಅಸ್ಸಾಂ ಸರ್ಕಾರ

ಅಸ್ಸಾಂನ ಆಸ್ಪತ್ರೆಯೊಂದರಲ್ಲಿ ಕಳೆದ ಎರಡು ದಿನಗಳಿಂದ ಎಂಟು ನವಜಾತ ಶಿಶುಗಳು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬರ್ಪೆಟಾ(ಅಸ್ಸಾಂ): ಅಸ್ಸಾಂನ ಆಸ್ಪತ್ರೆಯೊಂದರಲ್ಲಿ ಕಳೆದ ಎರಡು ದಿನಗಳಿಂದ ಎಂಟು ನವಜಾತ ಶಿಶುಗಳು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಅಸ್ಸಾಂ ಸರ್ಕಾರ ತನಿಖೆಗೆ ಆದೇಶಿಸಿದೆ.
ಅಸ್ಸಾಂನ ಬರ್ಪೆಟಾ ಜಿಲ್ಲೆಯ ಫಕ್ರುದ್ದೀನ್ ಆಲಿ ಅಹ್ಮದ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಮೃತಪಟ್ಟಿದ್ದವು.
ನವಜಾತ ಶಿಶುಗಳನ್ನು ರಕ್ಷಿಸಲು ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡಿದ್ದರೂ ಕೂಡ ಶಿಶುಗಳು ಬದುಕುಳಿಯಲಿಲ್ಲ ಎಂದು ಅಸ್ಸಾಂನ ಆರೋಗ್ಯ ಖಾತೆ ಸಚಿವ ಹಿಮಂತ ಬಿಸ್ವಾ ಶರ್ಮ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಸಾಕಷ್ಟು ವೈದ್ಯಕೀಯ ಸೌಲಭ್ಯಗಳಿವೆ ಎಂದು ಹೇಳಿದ್ದಾರೆ.ಶಿಶುಗಳು ಮರಣ ಹೊಂದಿದ ಬಗ್ಗೆ ವೈದ್ಯರುಗಳನ್ನು ವಿಚಾರಿಸಿ ಮಾಹಿತಿ ಪಡೆದಿದ್ದೇನೆ. ನವಜಾತ ಶಿಶುಗಳು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮೃತಪಟ್ಟವೇ ಹೊರತು ವೈದ್ಯರ ನಿರ್ಲಕ್ಷ್ಯದಿಂದಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ಸ್ಪಷ್ಟಪಡಿಸಿದ್ದಾರೆ.ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೂವರು ಶಿಶುಗಳು ಅಸ್ಫಿಕ್ಸಿಯಾ ಎಂಬ ಸಮಸ್ಯೆಯಿಂದ ಮೃತಪಟ್ಟಿವೆ. ಮೆದುಳು ಅಥವಾ ದೇಹದ ಇತರ ಭಾಗಗಳಿಗೆ ಸರಿಯಾಗಿ ಆಮ್ಲಜನಕ ಸಿಗದೆ ಮೃತಪಟ್ಟಿವೆ. ಇನ್ನು ಐದು ಶಿಶುಗಳು ತುಂಬಾ ಕಡಿಮೆ ತೂಕ ಹಾಗೂ ಹುಟ್ಟಿದ ತಕ್ಷಣದ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದವು ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.ಮೃತಪಟ್ಟ ಶಿಶುಗಳಲ್ಲಿ ಏಳು ಗಂಡು ಮತ್ತು ಒಂದು ಹೆಣ್ಣು ಶಿಶುವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com