ಸುಪ್ರೀಂ ಕೋರ್ಟ್ ಕೊಲಿಜಿಯಂ ತನ್ನ ನಿರ್ಧಾರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲು ನಿರ್ಧಾರ

ನ್ಯಾಯಾಧೀಶರ ನೇಮಕಾತಿಯಲ್ಲಿ ಹೆಚ್ಚು ಪಾರದರ್ಶಕತೆ ತರಲು ಮುಂದಾಗಿರುವ ಸುಪ್ರೀಂ ಕೋರ್ಟ್, ತನ್ನ ಕೊಲಿಜಿಯಂ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ನ್ಯಾಯಾಧೀಶರ ನೇಮಕಾತಿಯಲ್ಲಿ ಹೆಚ್ಚು ಪಾರದರ್ಶಕತೆ ತರಲು ಮುಂದಾಗಿರುವ ಸುಪ್ರೀಂ ಕೋರ್ಟ್, ತನ್ನ ಕೊಲಿಜಿಯಂ(ನ್ಯಾಯಾಧೀಶರ ನೇಮಕಾತಿ ಸಮಿತಿ) ನಿರ್ಧಾರಗಳನ್ನು ಮತ್ತು ಶಿಫಾರಸುಗಳನ್ನು ಸಾರ್ವಜನಿಕವಾಗಿ ವೆಬ್ ಸೈಟ್ ನಲ್ಲಿ ಪ್ರಕಟಿಸಲು ಮುಂದಾಗಿದೆ.
ನ್ಯಾಯಾಧೀಶರ ನೇಮಕ, ವರ್ಗಾವಣೆ ಮತ್ತು ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಐವರು ಹಿರಿಯ ನ್ಯಾಯಾಧೀಶರನ್ನೊಳಗೊಂಡ ಕೊಲಿಜಿಯಂ ನಿರ್ಧಾರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಇತ್ತೀಚಿಗಷ್ಟೇ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ಡಿ ಹೊಂದಬೇಕಿದ್ದ ಹಿರಿಯ ನ್ಯಾಯಾಧೀಶ ಜಯಂತ್ ಪಟೇಲ್ ಅವರನ್ನು ದಿಢೀರ್ ಅಲಹಬಾದ್ ಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಅಸಮಾಧಾನ ಗೊಂಡ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು. ಇದು ವಕೀಲರ ಆಕ್ರೋಶಕ್ಕೂ ಕಾರಣವಾಗಿತ್ತು. 
ನ್ಯಾಯಾಧೀಶರ ನೇಮಕಾತಿ ಸಮಿತಿಯಲ್ಲಿ ಕೇವಲ ನ್ಯಾಯಾಧೀಶರೇ ಇರುತ್ತಿದ್ದು, ಇವರೇ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ನೇಮಿಸುತ್ತಿದ್ದರು. ಈ ವ್ಯವಸ್ಥೆ ಪಾರದರ್ಶಕವಾಗಿಲ್ಲ ಎಂಬ ಕಾರಣ ನೀಡಿ ಸಂಸತ್ತು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (ಎನ್‌ಜೆಎಸಿ) ರಚನೆಯ ಮಸೂದೆಯನ್ನು ಪಾಸು ಮಾಡಿತ್ತು. ಆದರೆ ಇದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com