ವಿವಾದಿತ ಡೋಕ್ಲಾಮ್'ನಲ್ಲಿ ಚೀನಾ ಅತಿಕ್ರಮಣ ಮಾಡಿಲ್ಲ: ಭಾರತ ಸ್ಪಷ್ಟನೆ

ವಿವಾದಿತ ಡೋಕ್ಲಾಮ್ ಪ್ರದೇಶದಲ್ಲಿ ಚೀನಾ ಸೇನಾಪಡೆ ಜಾಗ ಅತಿಕ್ರಮಿಸುವ ಪ್ರಯತ್ನಗಳನ್ನು ಮಾಡುತ್ತಿಲ್ಲ, ಪ್ರಸ್ತುತ ಅಲ್ಲಿ ಯಥಾಸ್ಥಿತಿ ಇದಿ ಎಂದು ವಿದೇಶಾಂಗ ಸಚಿವಾಲಯ ಶನಿವಾರ ಸ್ಪಷ್ಟಪಡಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ವಿವಾದಿತ ಡೋಕ್ಲಾಮ್ ಪ್ರದೇಶದಲ್ಲಿ ಚೀನಾ ಸೇನಾಪಡೆ ಜಾಗ ಅತಿಕ್ರಮಿಸುವ ಪ್ರಯತ್ನಗಳನ್ನು ಮಾಡುತ್ತಿಲ್ಲ, ಪ್ರಸ್ತುತ ಅಲ್ಲಿ ಯಥಾಸ್ಥಿತಿ ಇದಿ ಎಂದು ವಿದೇಶಾಂಗ ಸಚಿವಾಲಯ ಶನಿವಾರ ಸ್ಪಷ್ಟಪಡಿಸಿದೆ. 
ಡೋಕ್ಲಾಮ್ ವಿವಾದ ಸಂಬಂಧ ಉಂಟಾಗಿದ್ದ ಗೊಂದಲಗಳ ಕುರಿತುತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಚಿವಾಲಯ, ಡೋಕ್ಲಾಮ್'ನಲ್ಲಿ ವಿವಾದಿತ ಪ್ರದೇಶದಲ್ಲಿ ಚೀನಾ ಯಾವುದೇ ರೀತಿಯ ಅತಿಕ್ರಮಣಗಳನ್ನು ಮಾಡಿಲ್ಲ. ಎಂದಿನಂತೆ ಅಲ್ಲಿನ ಪರಿಸ್ಥಿತಿಗಳು ಯಥಾಸ್ಥಿತಿಯಿದೆ ಎಂದು ಹೇಳಿದೆ. 
ವಿವಾದಾತ್ಮಕ ಪ್ರದೇಶದಲ್ಲಿ ಚೀನಾ ಅಕ್ರಮವಾಗಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ತಪ್ಪು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಹೇಳಿದ್ದಾರೆ. 
ಭಾರತ ಸ್ಪಷ್ಟನೆ ನೀಡಿರುವ ಬೆನ್ನಲ್ಲೇ ಚೀನಾ ಕೂಡ ಸ್ಪಷ್ಟನೆ ನೀಡಿದ್ದು, ಡೋಕ್ಲಾಮ್ ಸದಾ ನಮ್ಮ ಹಿಡಿತದಲ್ಲೇ ಇತ್ತು. ಅಲ್ಲಿ ನಮ್ಮ ಯೋಧರು ಗಡಿ ಕಾವಲು ಕಾಯುತ್ತಿದ್ದಾರೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದ್ದು, ಈಗಲೂ ಅದು ಮುಂದುವರೆದಿದೆ ಎಂದು ಹೇಳಿದೆ. 
ಈ ನಡುವೆ ಡೋಕ್ಲಾಮ್ ಪ್ರದೇಶಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಭೇಟಿ ನೀಡಲಿದ್ದಾರೆ. ಭೇಟಿ ವೇಳೆ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷಣಾ ಪಡೆ ಸಿಬ್ಬಂದಿ ಜೊತೆಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com