ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಲಭೆಯನ್ನು ಹತೋಟಿಗೆ ತರಲು ಪೊಲೀಸರು ಬಳಸುತ್ತಿರುವ ಪೆಲೆಟ್ ಗನ್ ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಪೆಲೆಟ್ ಬದಲು ಹೊಸದಾಗಿ ಅಭಿವೃದ್ಧಿಪಡಿಸಿದ 21 ಸಾವಿರ ಸುತ್ತಿನ ಪ್ಲಾಸ್ಟಿಕ್ ಬುಲೆಟ್ ಗಳನ್ನು ರವಾನಿಸಿದೆ ಎಂದು ಶನಿವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.