ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಜಮ್ಮು: ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ಶನಿವಾರ ತಿಳಿದುಬಂದಿದೆ. 
ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ರಾತ್ರಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. 
ಕಳೆದ ಹಲವು ದಿನಗಳಿಂದಲೂ ಗಡಿಯಲ್ಲಿ ಪಾಕಿಸ್ತಾನ ಸೇನೆ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದೆ. ಕಳೆದ ವರ್ಷ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ 228 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com