ಜಿಎಸ್'ಟಿ ಸಮಿತಿ ಸಭೆ: ಪ್ರಧಾನಿ ಮೋದಿ, ಜೇಟ್ಲಿ ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ- ಕಾಂಗ್ರೆಸ್

ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ಕುರಿತಂತೆ ಕೇಂದ್ರ ಸರ್ಕಾರ ಮಾಡುತ್ತಿದ್ದ ಮನವಿಯನ್ನು ಕಾಂಗ್ರೆಸ್ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿತ್ತು. ಆದರೂ, ಜಿಎಸ್'ಟಿ ಜಾರಿಗೆ ತರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ...
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ಕುರಿತಂತೆ ಕೇಂದ್ರ ಸರ್ಕಾರ ಮಾಡುತ್ತಿದ್ದ ಮನವಿಯನ್ನು ಕಾಂಗ್ರೆಸ್ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿತ್ತು. ಆದರೂ, ಜಿಎಸ್'ಟಿ ಜಾರಿಗೆ ತರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆಂದು ಕಾಂಗ್ರೆಸ್ ಶನಿವಾರ ಹೇಳಿದೆ. 

ನೋಟು ನಿಷೇಧದ ಬಳಿಕ ಕುಸಿದಿರುವ ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿನ್ನೆಯಷ್ಟೇ  ಜಿಎಸ್ ಟಿ ಕೌನ್ಸಿಲ್ ಸಭೆ ನಡೆದಿತ್ತು. ಸಭೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿದಂತೆ ಇನ್ನಿತರೆ ಉನ್ನತಾಧಿಕಾರಿಗಳು ಹಾಜರಿದ್ದರು. 

ಸಭೆ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಸಂದೀರ್ ದೀಕ್ಷಿತ್ ಅವರು, ರಫ್ತುದಾರರಿಗೆ ತೆರಿಗೆಯಿಂದ ಮುಕ್ತ ಹಾಗೂ ದೇಶದ ಜನತೆಯ ಅಗತ್ಯತೆಗಳಿಗಾಗಿ ಕಾಂಗ್ರೆಸ್ ಈ ಹಿಂದಿನಿಂದಲೂ ಹೋರಾಡುತ್ತಲೇ ಬರುತ್ತಿದೆ. ಆರಂಭದಿಂದಲೂ ಜಿಎಸ್'ಟಿ ಮಸೂದೆಯನ್ನು ಪರಿಷ್ಕರಿಸುವಂತೆ ಕೇಂದ್ರದ ಬಳಿ ಮನವಿ ಮಾಡುತ್ತಲೇ ಬಂದಿದೆ. ಆದರೂ, ನಮ್ಮ ಮನವಿಯನ್ನೂ ಯಾರೊಬ್ಬರೂ ಕೇಳಲೇ ಇಲ್ಲ. ಆಗಲಾದರೂ ಕೇಂದ್ರ ಉನ್ನತಿಗಾಗಿ ಕೇಂದ್ರ ಸರ್ಕಾರ ಮನಸ್ಸು ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. 

ಇದರಂತೆ ಮತ್ತೊಬ್ಬ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿಯವರು ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳುವಂತೆ ಮಾಡಿದ್ದಾರೆಂದು ಹೇಳಿದ್ದಾರೆ. 

ಕೌನ್ಸಿಲ್ ಸಭೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅರುಣ್ ಜೇಟ್ಲಿಯವರು ದೇಶದ ಜನತೆ ಮತ್ತಷ್ಟು ಸಿಲುಕಿ ಹಾಕಿಕೊಳ್ಳುವಂತೆ ಮಾಡಿದ್ದಾರೆ. ಮೊದಲ ಬಾರಿಗೆ ರಫ್ತುದಾರರಿದೆ ತೆರಿಗೆಯಿಂದ ಸರ್ಕಾರ ಕೊಂಚ ನಿರಾಳವನ್ನು ನೀಡಿದೆ. ಕೇಂದ್ರ ಸರ್ಕಾರ ಸಣ್ಣ ಉದ್ದಿಮದಾರರನ್ನು ನಿರ್ಲಕ್ಷಿಸಿ, ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವುದನ್ನು ನಾವು ಈ ಹಿಂದಿನಿಂದಲೂ ನೋಡಿದ್ದೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com