ಸಂಗ್ರಹ ಚಿತ್ರ
ದೇಶ
ವಿಧವೆಯ ವಿವಾಹವಾದರೆ ಮಧ್ಯ ಪ್ರದೇಶ ಸರ್ಕಾರದಿಂದ 2 ಲಕ್ಷ ಉಡುಗೊರೆ!
ಮಧ್ಯ ಪ್ರದೇಶ ಸರ್ಕಾರ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಈ ಯೋಜನೆ ಅನ್ವಯ ವಿಧವೆಯರನ್ನು ಮದುವೆಯಾಗುವವರಿಗೆ ರಾಜ್ಯ ಸರ್ಕಾರ 2 ಲಕ್ಷ ರು.ಗಳನ್ನು ಉಡುಗೊರೆಯಾಗಿ ನೀಡಲಿದೆ.
ಭೋಪಾಲ್: ಮಧ್ಯ ಪ್ರದೇಶ ಸರ್ಕಾರ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಈ ಯೋಜನೆ ಅನ್ವಯ ವಿಧವೆಯರನ್ನು ಮದುವೆಯಾಗುವವರಿಗೆ ರಾಜ್ಯ ಸರ್ಕಾರ 2 ಲಕ್ಷ ರು.ಗಳನ್ನು ಉಡುಗೊರೆಯಾಗಿ ನೀಡಲಿದೆ.
ಮಧ್ಯಪ್ರದೇಶದಲ್ಲಿ ವಿಧವಾ ವಿವಾಹವನ್ನು ಪ್ರೋತ್ಸಾಹಿಸುವ ಉದ್ದೇಶಕ್ಕಾಗಿ ಶಿವರಾಜ್ ಸಿಂಗ್ ಚೌಹ್ವಾಣ್ ನೇತೃತ್ವದ ಸರ್ಕಾರ ಈ ಯೋಜನೆ ಘೋಷಣೆ ಮಾಡಿದ್ದು, ಅಲ್ಲಿನ ಸಾಮಾಜಿಕ ನ್ಯಾಯ ಇಲಾಖೆಯು 18ರಿಂದ 45ರ ಹರೆಯದ ವಿಧವೆಯನ್ನು ವಿವಾಹವಾಗುವ ವರನಿಗೆ ಸರ್ಕಾರದಿಂದ 2 ಲಕ್ಷ ರೂ ಉಡುಗೊರೆ ನೀಡುವುದಾಗಿ ಘೋಷಣೆ ಮಾಡಿದೆ.
ಈ ವಿನೂತನ ಯೋಜನೆ ಮೂಲಕ ಸರ್ಕಾರ ವಾರ್ಷಿಕ ಸುಮಾರು 1 ಸಾವಿರ ವಿಧವಾ ವಿವಾಹವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದೆ. ಕಳೆದ ಜುಲೈನಲ್ಲಿ ಸುಪ್ರೀಂ ಕೋರ್ಟ್ ವಿಧವಾ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸೂಕ್ತ ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಆದೇಶದಿಂದ ಪ್ರೇರಿತವಾಗಿರುವ ಮಧ್ಯಪ್ರದೇಶ ಸರ್ಕಾರ ವಿಧವಾ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ. ಸರ್ಕಾರದ ಈ ಯೋಜನೆಗಾಗಿ ಪ್ರತಿವರ್ಷ 20 ಕೋಟಿ ರೂ. ಒದಗಿಸಲಿದೆ ಎಂದು ಹೇಳಲಾಗುತ್ತಿದೆ.
ಸರ್ಕಾರದ ವಿಧವಾ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದೆಯಾದರೂ ಪ್ರಸ್ತುತ ಮಧ್ಯ ಪ್ರದೇಶ ರಾಜ್ಯದಲ್ಲಿ ಪ್ರತಿವರ್ಷ ಎಷ್ಟು ವಿಧವಾ ವಿವಾಹ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಸಿಲ್ಲ.

Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ