ದಿ ವೈರ್ ವರದಿ: 7 ಜನರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಷಾ ಪುತ್ರ: ಅ.11 ಕ್ಕೆ ವಿಚಾರಣೆ

ದಿ ವೈರ್ ಎಂಬ ಸುದ್ದಿ ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದ ವರದಿಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ 7 ಜನರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಜಯ್ ಷಾ
ಜಯ್ ಷಾ
ನವದೆಹಲಿ: ದಿ ವೈರ್ ಎಂಬ ಸುದ್ದಿ ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದ ವರದಿಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ 7 ಜನರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 
ಜಯ್ ಷಾ ಸಂಸ್ಥೆ ಅತ್ಯಲ್ಪ ಅವಧಿಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದೆ ಎಂದು ದಿ ವೈರ್ ವೆಬ್ ಸೈಟ್ ನಲ್ಲಿ ವರದಿ ಪ್ರಕಟವಾಗಿತ್ತು. ವರದಿಯನ್ನು ಬರೆದಿದ್ದ ಪತ್ರಕರ್ತೆ, ಸುದ್ದಿ ವೆಬ್ ಸೈಟ್ ನ ಸಂಪಾದಕರು ಹಾಗೂ ವೆಬ್ ಸೈಟ್ ನ ಮಾಲಿಕರ ವಿರುದ್ಧ ಅಹಮದಾಬಾದ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 
ನ್ಯಾಯಾಲಯ ಅ.11 ಕ್ಕೆ ಅರ್ಜಿ ವಿಚಾರಣೆ ನಡೆಸಲಿದೆ. ಜಯ್ ಷಾ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಪುತ್ರ ಜಯ್‌ ಅಮಿತ್‌ ಬಾಯ್‌ ಶಾ ಅವರ ಒಡೆತನದ ಕಂಪೆನಿಯ ಆದಾಯ ಕೇವಲ ಒಂದೇ ವರ್ಷದಲ್ಲಿ ರು.50 ಸಾವಿರದಿಂದ ರು.80 ಕೋಟಿಗೆ ಏರಿಕೆಯಾಗಿದೆ ಎಂದು 'ದಿ ವೈರ್‌' ಸುದ್ದಿತಾಣ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿದ್ದ ಪತ್ರಕರ್ತರು, ವೆಬ್ ಸೈಟ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಜಯ್ ಷಾ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com