ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ, ಸೇನಾ ಅಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ ಓರ್ವ ಕಿರಿಯ ನಿಯೋಜಿತ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ ಓರ್ವ ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ.
ಭಾನುವಾರ ಮಧ್ಯರಾತ್ರಿ ಬದ್ಲಮ್ ಜಿಲ್ಲೆಯ ಡ್ರಂಗ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಕೂಡಲೇ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಂದು ಬೆಳಗ್ಗೆ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಬೆದಾರ್ ರಾಜ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ ಪೊಲೀಸ್ ಮೂಲಗಳು ತಿಳಿಸಿವೆ.
ಈ ಮಧ್ಯೆ ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಜೆಸಿಒ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com