ದೆಹಲಿಯಲ್ಲಿ ಮಿತಿ ಮೀರಿರುವ ವಾಯು ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಮುಂಬರುವ ನವೆಂಬರ್ 1ರ ತನಕ ಪಟಾಕಿ ಸಿಡಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ. ಇದೇ ಅಕ್ಟೋಬರ್ ದೀಪಾವಳಿ ಹಬ್ಬದ ತಿಂಗಳಾದ್ದರಿಂದ ಪಟಾಕಿ ಮಾರಾಟ ಮತ್ತು ಪಟಾಕಿ ಬಳಕೆ ಹೆಚ್ಚು ಮಾಡುವುದರಿಂದ ದೆಹಲಿಯಲ್ಲಿ ವಾಯುಮಾಲೀನ್ಯ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂ ಕೋರ್ಟ್ ಪಟಾಕಿ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದೆ.
ದೇಶಾದ್ಯಂತ ದೀಪಾವಳಿ ಹಬ್ಬದಂದು ಪಟಾಕಿ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ವಾಯುಮಾಲೀನ್ಯ ಹೆಚ್ಚಾಗುವ ಅಪಾಯವಿದೆ. ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿಂದೆ ಅಂದರೆ ಸೆಪ್ಟೆಂಬರ್ ನಲ್ಲೂ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಪಟಾಕಿ ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿತ್ತು. ಮದುವೆ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಪಟಾಕಿ ಬಳಕೆ ಅತ್ಯಧಿಕವಾಗುವುದರಿಂದ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದಕ್ಕಾಗಿ ದೆಹಲಿ ಮತ್ತು ದೆಹಲಿ ವಲಯದಲ್ಲಿ (ಎನ್‌ಸಿಆರ್) ತಕ್ಷಣದಿಂದಲೇ ಜಾರಿಗೆ ಬರುವಂತೆ ಪಟಾಕಿ ನಿಷೇಧ ಜಾರಿಗೆ ತರಲಾಗಿತ್ತು. ಅಂತೆಯೇ ಮುಂದಿನ ಆದೇಶದವರೆಗೂ ಪಟಾಕಿ ಮಾರಾಟಗಾರರ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಸುಪ್ರೀಂ ಹೇಳಿತ್ತು.
ಇದೇ ಇದೇ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಹಾಗೂ ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಹಾಗೂ ಎಸ್.ಎ. ಬಾಬ್ಡೆ ಅವರ ನ್ಯಾಯಪೀಠ "ಸಾರ್ವಜನಿಕರ ಹಿತದ ಉದ್ದೇಶದಿಂದ ದೆಹಲಿ ಮತ್ತು ಸುತ್ತಮುತ್ತ ಪಟಾಕಿಗಳ ದಾಸ್ತಾನು ಹಾಗೂ ಮಾರಾಟ ಪರವಾನಗಿಯನ್ನು ರದ್ದು ಮಾಡಲಾಗಿದೆ" ಎಂದು ಆದೇಶ ನೀಡಿದೆ.