ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಪೂಂಜ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಜ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ಸೋಮವಾರ ತಿಳಿದುಬಂದಿದೆ. 
ಕಳೆದ ರಾತ್ರಿ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಎಂದು ವರದಿಗಳು ತಿಳಿಸಿವೆ. 
ಶುಕ್ರವಾರ ರಾತ್ರಿ ಕೂಡ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಕಳೆದ ವರ್ಷ ಪಾಕಿಸ್ತಾನ ಸೇನೆ ಒಟ್ಟು 228 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com