ದೇಶ

ಭಯೋತ್ಪಾದನೆ ವಿರುದ್ಧ ದನಿ ಎತ್ತುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ: ರಾಜನಾಥ್ ಸಿಂಗ್

ಭಯೋತ್ಪಾದನೆ ವಿರುದ್ಧ ದನಿ ಎತ್ತುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ: ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್
Published On :

ಚೆನ್ನೈ: ಭಯೋತ್ಪಾದನೆ ವಿರುದ್ಧ ವಿಶ್ವದ ರಾಷ್ಟ್ರಗಳು ದನಿ ಎತ್ತುವಂತೆ ಮಾಡುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 

ಚೆನ್ನೈನಲ್ಲಿ ನಡೆಯುತ್ತಿರುವ ಸಹಾಯಕ ಕಮಾಂಡೆಂಟ್ ಗಳ ಪರೇಡ್ ನಲ್ಲಿ ಮಾತನಾಡಿರುವ ಅವರು, ಹಲವು ವಿದೇಶಗಳಲ್ಲಿ ಭಯೋತ್ಪಾದನೆ ಎಂಬುದು ದೊಡ್ಡ ಸಮಸ್ಯೆಯಾಗಿ ಹೋಗಿದೆ. ನಮ್ಮ ಪ್ರಧಾನಮಂತ್ರಿಗಳು ಭಯೋತ್ಪಾದನೆ ವಿರುದ್ಧ ಅಂತರಾಷ್ಟ್ರೀಯ ವೇದಿಕೆಯಲ್ಲಿ ಪರಿಣಾಕಾರಿಯಾಗಿ ಹಾಗೂ ಬಲವಾಗಿ ದನಿ ಎತ್ತಿದ್ದಾರೆ ಎಂದು ಹೇಳಿದ್ದಾರೆ. 
ಕೆಲ ಸಮಾಜಘಾತುಕ ಶಕ್ತಿಗಳು ಸೂಕ್ಷ್ಮ ಪ್ರದೇಶಗಳನ್ನು ಗುರಿ ಮಾಡಿಕೊಂಡು ದೇಶದ ಆರ್ಥಿಕ ಹಾಗೂ ಕಾರ್ಯತಂತ್ರದ ಶಕ್ತಿಯನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ದೇಶದ ಭದ್ರತೆಗಾಗಿ ತಮ್ಮ ಕೊಡುಗೆಯನ್ನು ನೀಡುತ್ತಿರುವ ಎನ್ಐಎಸ್ಎ ತರೇಬೇತುದಾರರನ್ನು ಕೊಂಡಾಡಿದ್ದಾರೆ. 

ಭಯೋತ್ಪಾದೆ ವಿರುದ್ದದ ಹೋರಾಟದಲ್ಲಿ ಸಿಐಎಸ್ಎಫ್ ಸಾಕಷ್ಟು ಸಾಮರ್ಥ್ಯವನ್ನು ಹೊಂದಿರಬೇಕಾಗುತ್ತದೆ. ಇದರಿಂದ ಶತ್ರುಗಳು ನಮ್ಮ ದೇಶದ ಪ್ರಮುಖ ಕಾರ್ಯತಂತ್ರಗಳನ್ನು ಗುರಿ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಐಎಸ್ಎಪ್ ಪ್ರತೀ ಬಾರಿ ಭದ್ರತಾ ಲೆಕ್ಕಪರಿಶೋದನೆಗಳನ್ನು ಕೈಗೊಳ್ಳಬೇಕು ಮತ್ತು ಭದ್ರತೆಯನ್ನು ಬಲಪಡಿಸುವ ಸಲುವಾಗಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.