ಮುಂಬೈ: ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದ ನಂತರ ಮಹಾರಾಷ್ಟ್ರದಲ್ಲೂ ಪಟಾಕಿ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ.
ಮಹಾರಾಷ್ಟ್ರದ ವಸತಿ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟಕ್ಕೆ ಬಾಂಬೆ ಹೈಕೋರ್ಟ್ ನಿಷೇಧ ವಿಧಿಸಿದೆ. ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ನವೆಂಬರ್ 1 ವರೆಗೂ ಪಟಾಕಿ ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.