ನಮ್ಮ ಸರ್ಕಾರದ ಸಾಧನೆಗೆ 10ಕ್ಕೆ 5 ಅಂಕ, ಆದರೆ ಮೋದಿ ಸರ್ಕಾರಕ್ಕಿಂತ ನಾವೇ ಉತ್ತಮರು: ರಾಹುಲ್
ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಮ್ಮ ಕಾರ್ಯಕ್ಷಮತೆ 10ರಲ್ಲಿ ಐದೇ ಇದ್ದಿರಬಹುದು ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಗಿಂತ ನಾವು ಉತ್ತಮರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ...

Published On :
ನವದೆಹಲಿ: ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಮ್ಮ ಕಾರ್ಯಕ್ಷಮತೆ 10ರಲ್ಲಿ ಐದೇ ಇದ್ದಿರಬಹುದು ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಗಿಂತ ನಾವು ಉತ್ತಮರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.
ವಡೋದರದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ಇದ್ದಿರಬಹುದು. ಆದರೆ, ಪ್ರಸ್ತುತ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕಿಂತಲೂ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.
ಯುಪಿಎ ಸರ್ಕಾರ ಅಧಿಕಾರಾವಧಿಯಲ್ಲಿ ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಕುರಿತಂತೆ ಸೂಕ್ತರೀತಿಯಲ್ಲಿ ಗಮನ ಹರಿಸಲಿಲ್ಲ. ಆದರೆ, ಎನ್ ಡಿಎ ಸರ್ಕಾರಕ್ಕೆ ಹೋಲಿಕೆ ಮಾಡಿದರೆ, ನಮ್ಮ ಕಾರ್ಯಕ್ಷಮತೆ ಉತ್ತಮವಾಗಿತ್ತು. ಕಾರ್ಯಕ್ಷಮತೆಯಲ್ಲಿ ನಾವು 10 ರಲ್ಲಿ 5 ಅಂಕವನ್ನು ಪಡೆದುಕೊಂಡಿರಬಹುದು ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕಿಂತಲೂ ಉತ್ತಮರಾಗಿದ್ದವು. ಪ್ರಸ್ತುತ ಅಧಿಕಾರ ನಡೆಸುತ್ತಿರುವ ಸರ್ಕಾರ ಯುವಕರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. 24 ಗಂಟೆಗಳಲ್ಲಿ 450 ಉದ್ಯೋಗಗಳನ್ನು ದೊರಕಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಪ್ರತೀನಿತ್ಯ 30 ಸಾವಿರ ಯುವಕರು ಉದ್ಯೋಗ ಮಾರುಕಟ್ಟೆ ಪ್ರವೇಶಿಸುತ್ತಿದ್ದಾರೆ,
ಚೀನಾ ದೇಶದಲ್ಲಿ ಪ್ರತೀನಿತ್ಯ 50,000 ಉದ್ಯೋಗಗಳನ್ನು ಸೃಷ್ಟಿಸಲಾಗುತ್ತಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಪ್ರತಿನಿತ್ಯ 30,000 ದಿಂದ 40,000 ಉದ್ಯೋಗಗಳನ್ನು ದೊರಕಿಸಿಕೊಡಬೇಕಿದೆ. ಇಲ್ಲದೆ, ಹೋದರೆ ಮುಂದಿನ 10 ವರ್ಷದಲ್ಲಿ ಜನರ ಆಕ್ರೋಶಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಹೋಗಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


