ಆರುಷಿ ಕೊಲೆ ಪ್ರಕರಣ: ಅಲಹಾಬಾದ್ ಹೈಕೋರ್ಟ್ ತೀರ್ಪು ಇಂದು

ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ಪ್ರಕಟಿಸಲಿದೆ...
ಆರುಷಿ ತಲ್ವಾರ್
ಆರುಷಿ ತಲ್ವಾರ್

ಲಖನೌ: ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ಪ್ರಕಟಿಸಲಿದೆ. 

ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಮಾಡಿದ ಅಪರಾಧಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ನ್ಯಾಯಾಲಯ ಆರುಷಿಯ ಹೆತ್ತವರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರಿಗೆ ಜೀವಾಧಿ ಶಿಕ್ಷೆಯನ್ನು ವಿಧಿಸಿತ್ತು. 

ಘಜಿಯಾಬಾದ್ ನ ಸಿಬಿಐ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿದ್ದ ಆರುಷಿ ಹೆತ್ತವರು ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾದಿರಿಸಿತ್ತು. 

2008 ಮೇ 16ರಂದು 14 ವರ್ಷ ಪ್ರಾಯದ ಆರುಷಿಯನ್ನು ಮನೆಯಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಲಾಗಿತ್ತು. ಮನೆಯ ಕೊಠಡಿಯಲ್ಲಿ ಆರುಷಿ ಶವ ಪತ್ತೆಯಾಗಿತ್ತು. ಇದಾದ 2 ದಿನಗಳ ಬಳಿಕ ಮನೆ ಕೆಲಸದಾತ ಹೇಮರಾಜ್ ಸಹ ಹತ್ಯೆಗೀಡಾಗಿದ್ದ. ಹೇಮರಾಜ್ ಶವ ಮನೆಯ ಟೆರೆಸ್ ನಲ್ಲಿ ಸಿಕ್ಕಿತ್ತು. ಈ ಎರಡೂ ಹತ್ಯೆಯನ್ನು ಆರುಷಿ ಪೋಷಕರೇ ಮಾಡಿದ್ದರು. ಈ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com