ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ: ಸಾಂವಿಧಾನಿಕ ಪೀಠಕ್ಕೆ ಅರ್ಜಿ ವರ್ಗಾಯಿಸಿದ 'ಸುಪ್ರೀಂ'

ಭಾರಿ ಚರ್ಚೆಗೆ ಕಾರಣವಾಗಿರುವ ಐತಿಹಾಸಿಕ ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಭಾರಿ ಚರ್ಚೆಗೆ ಕಾರಣವಾಗಿರುವ ಐತಿಹಾಸಿಕ ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
ವಿವಿಧ ಮಹಿಳಾ ಪರ ಸಂಘಟನೆಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಪ್ರಮುಖ ಆರು ಪ್ರಶ್ನೆಗಳೊಂದಿಗೆ ಅರ್ಜಿಯನ್ನು ಸಾಂವಿಧಾನಿಕ  ಪೀಠಕ್ಕೆ ವರ್ಗಾಯಿಸಿದೆ. ಪ್ರಮುಖವಾಗಿ ಶಬರಿ ಮಲೈ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ನಿರ್ಬಂಧ ಹೇರಿರುವ ದೇಗುಲದ ಆಡಳಿತ ಮಂಡಳಿ ನಿರ್ಧಾರ, ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆಯೇ  ಎಂಬುದನ್ನು ಪರಿಶೀಲಿಸಬೇಕಿದೆ.
ಅಂತೆಯೇ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸುವ ಹಕ್ಕು ದೇಗುಲಕ್ಕೆ ಇದೆಯೇ?, ದೇಗುಲದ ಈ ನಡೆ ಸಾಂವಿಧಾನಿಕ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆಯೇ? ಎಂಬಿತ್ಯಾದಿ ಅಂಶಗಳನ್ನು ಪರಿಶೀಲಿಸುವಂತೆ  ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸೂಚಿಸಿದೆ.
ಖ್ಯಾತ ಪವಿತ್ರ ಯಾತ್ರಾತಾಣವಾಗಿರುವ ಕೇರಳದ ಶಬರಿ ಮಲೈ ದೇಗುಲದಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷ್ಧಿದ್ಧ ಪಡಿಸಲಾಗಿದೆ. ಹೆಣ್ಣುಮಕ್ಕಳ ಮುಟ್ಟಿನ  ಸಮಸ್ಯೆಯಿಂದಾಗಿ ಪ್ರವೇಶ ನಿರಾಕರಿಸಲಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದೆ. ಇದೇ ಕಾರಣಕ್ಕೆ ಹಲವು ಮಹಿಳಾ ಪರ ಸಂಘಟನೆಗಳು ದೇಗಲ ಪ್ರವೇಶಕ್ಕೆ ಅನುಮತಿ ಕೋರಿ  ಕೋರ್ಟ್ ಮೆಟ್ಟಿಲೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com