ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನ ನಂದಮಾರ್ಗ್ ದಲ್ಲಿ ಪೊಲೀಸ್ ವಾಹನದ ಮೇಲೆ ಶನಿವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ವಾಹನ ಚಾಲಕ ಹುತಾತ್ಮರಾಗಿದ್ದಾರೆ ಮತ್ತು ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದಕ್ಕು ಮುನ್ನ ಪುಲ್ವಂ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಎಲ್ ಇಟಿ ಉಗ್ರರನ್ನು ಹೊಡೆದುರುಳಿಸಿದ್ದರು.