ವಿರೋಧ ಪಕ್ಷವನ್ನು ಹತ್ತಿಕ್ಕಲು ಹಣ ಬಲ ಮತ್ತು ತೋಳ್ಬಲದ ಬಳಕೆ: ಶಿವಸೇನೆ ಆರೋಪ

ಭಂಡಪ್ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರತಿಕ್ರಿಯಿಸಿರುವ ಶಿವಸೇನೆ, ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ....
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
ಮುಂಬೈ: ಭಂಡಪ್ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರತಿಕ್ರಿಯಿಸಿರುವ ಶಿವಸೇನೆ, ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಹಣ ಮತ್ತು ತೋಳ್ಬಲವನ್ನು ಬಳಸಲಾಗಿದ್ದು ಭ್ರಷ್ಟ ಮಾರ್ಗದ ಮೂಲಕ ಚುನಾವಣೆಯಲ್ಲಿ ಜಯ ಸಾಧಿಸಲಾಗಿದೆ ಎಂದು ಆರೋಪಿಸಿದೆ.
ರಾಜಕೀಯ ವಿರೋಧ ಪಕ್ಷದವರ ಧ್ವನಿಯನ್ನು ಹತ್ತಿಕ್ಕುವ ವಾತಾವರಣವನ್ನು ದೇಶದಲ್ಲಿ ಸೃಷ್ಟಿಸಲಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ಭ್ರಷ್ಟಾಚಾರ ಮಾರ್ಗಗಳನ್ನು ಬಳಸಲಾಗುತ್ತದೆ ಎಂದರು.
ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಹಣಬಲ ಮತ್ತು ತೋಳ್ಬಲಗಳನ್ನು ಬಳಸಲಾಗುತ್ತಿದೆ. ಇಂತಹ ಪರಿಸ್ಥಿತಿ ದೇಶಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ಸ್ವಾತಂತ್ರ್ಯಕ್ಕೆ ಮಾರಕ ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರಗಳಲ್ಲಿ ಶಿವಸೇನೆ ಆಡಳಿತಾರೂಢ ಬಿಜೆಪಿಯ ಭಾಗವಾಗಿದ್ದರೂ ಕೂಡ ಅನೇಕ ವಿಷಯಗಳಲ್ಲಿ ಬಿಜೆಪಿಯನ್ನು ಟೀಕಿಸುತ್ತದೆ.
ಮುಂಬೈಯ ನಾಂದೇಡ್-ವಘಲ ಪುರಸಭೆಯ ಚುನಾವಣೆಯಲ್ಲಿ ಇತ್ತೀಚೆಗೆ ವಿರೋಧ ಪಕ್ಷವನ್ನು ಸೋಲಿಸಲು ಬಿಜೆಪಿ ಕಾಂಗ್ರೆಸ್ ಮತ್ತು ಶಿವಸೇನೆಯ ಕಾರ್ಪೊರೇಟರ್ ಗಳನ್ನು ಹಣ ಕೊಟ್ಟು ಖರೀದಿಸಲು ಪ್ರಯತ್ನಿಸಿತ್ತು ಎಂದು ಶಿವಸೇನೆ ಆಪಾದಿಸಿದೆ.
ಮೊನ್ನೆ ಗುರುವಾರ ಪ್ರಕಟಗೊಂಡ ಫಲಿತಾಂಶದಲ್ಲಿ ಭಂಡಪ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಾಗ್ರುತಿ ಪಾಟೀಲ್ ಗೆಲುವು ಕಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com