ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ರೆ ಶಬರಿಮಲೆ 'ಸೆಕ್ಸ್ ಟೂರಿಸಂ' ಕೇಂದ್ರವಾಗುತ್ತೆ!

ಒಂದು ವೇಳೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದರೆ....
ಶಬರಿಮಲೆ ದೇವಸ್ಥಾನ
ಶಬರಿಮಲೆ ದೇವಸ್ಥಾನ
Updated on: 
ತಿರುವನಂತಪುರಂ: ಒಂದು ವೇಳೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದರೆ ಹಿಂದೂಗಳ ಪಾಲಿನ ಪುಣ್ಯಕ್ಷೇತ್ರ ಸೆಕ್ಸ್ ಟೂರಿಸಂ' ಕೇಂದ್ರವಾಗಿ ಮಾರ್ಪಡುತ್ತೆ ಎಂದು ಕೇರಳ ದೇವಸ್ವಂ ಮಂಡಳಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಬೆನ್ನಲ್ಲೇ ಕೇರಳ ದೇವಸ್ವಂ ಮಂಡಳಿ ಮುಖ್ಯಸ್ಥ ಪ್ರಾಯರ್ ಗೋಪಾಲಕೃಷ್ಣನ್ ಅವರು, ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿದರೆ ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಹೀಗಾದರೆ ಶಬರಿಮಲೆ ಥಾಯ್ಲೆಂಡ್ ನಂತೆ ಸೆಕ್ಸ್ ಟೂರಿಸಂ ಕೇಂದ್ರವಾಗಿ ಮಾರ್ಪಡುತ್ತದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದರೆ ಅವರಿಗೆ ಭದ್ರತೆ ಕಲ್ಪಿಸುತ್ತೇವೆ ಎಂಬ ಭರವಸೆ ನೀಡಲಾಗುವುದಿಲ್ಲ. ಶಬರಿಮಲೆಯನ್ನು ನಾವು ಥಾಯ್ಲೆಂಡ್‍ನಂತೆ ಸೆಕ್ಸ್ ಟೂರಿಸಂ ಕೇಂದ್ರವನ್ನಾಗಿ ಮಾಡಲು ಇಚ್ಛಿಸುವುದಿಲ್ಲ.  ಒಂದು ವೇಳೆ ಮಹಿಳೆಯರು ದೇಗುಲ ಪ್ರವೇಶಿಸಲಿ ಎಂದು ಕೋರ್ಟ್ ಅನುಮತಿ ನೀಡಿದರೂ, ಸ್ವಾಭಿಮಾನಿ ಮಹಿಳೆಯರು ಯಾರೂ ಶಬರಿಮಲೆಯೊಳಗೆ ಪ್ರವೇಶಿಸಲು ಧೈರ್ಯ ತೋರಿಸಲಾರರು ಎಂದು ಗೋಪಾಲಕೃಷ್ಣನ್ ಹೇಳಿದ್ದಾರೆ.
ದೇವಸ್ವಂ ಮಂಡಳಿ ಮುಖ್ಯಸ್ಥ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕೇರಳ ಸಚಿವ ಸುರೇಂದ್ರನ್ ಅವರು, ಗೋಪಾಲಕೃಷ್ಣನ್ ಅವರು ಯಾಕೆ ಈ ರೀತಿ ಅಸಂಬದ್ಧ ಮಾತುಗಳನ್ನಾಡುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಅವರು ಮಹಿಳೆಯರನ್ನು ಮತ್ತು ಯಾತ್ರಾರ್ಥಿಗಳನ್ನು ಅವಹೇಳನ ಮಾಡಿದ್ದಾರೆ. ಅವರು ಈ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದಿದ್ದಾರೆ.
10 ಮತ್ತು 50 ವರ್ಷದೊಳಗಿನ ಮಹಿಳೆಯರಿಗೆ  ಶಬರಿಮಲೆ ದೇಗುಲದೊಳಗೆ ಪ್ರವೇಶ ನಿಷಿದ್ಧ. ಮಹಿಳೆಯರು ಮುಟ್ಟಾಗುತ್ತಾರೆ ಎಂಬ ಕಾರಣದಿಂದ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 10 ವಯಸ್ಸಿಗಿಂತ ಕಿರಿಯ ಮತ್ತು  50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಮಾತ್ರ ದೇಗುಲದೊಳಗೆ ಪ್ರವೇಶಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com