ಪುಲ್ವಾಮದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪ್ರಮುಖ ಲಷ್ಕರ್ ಕಮಾಂಡರ್ ಗಳ ಹತ್ಯೆ

ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.

ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಡಲೇ ಪುಲ್ವಾಮದ ಲಿಟ್ಟರ್ ಪ್ರಾಂತ್ಯವನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳನ್ನು ಕಂಡ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ  ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರು ಸೈನಿಕರ ದಾಳಿಯಲ್ಲಿ ಹತರಾಗಿದ್ದಾರೆ. 

ಮೃತ ಉಗ್ರರರನ್ನು ಕುಖ್ಯಾತ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾದ ಪ್ರಮುಖ ಕಮಾಂಡರ್ ಗಳಾದ ವಸೀಂ ಶಾ ಮತ್ತು ನಿಸಾರ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ. ಇಬ್ಬರೂ ಲಷ್ಕರ್ ಉಗ್ರ ಸಂಘಟನೆಯ ಪ್ರಮುಖ  ಕಮಾಂಡರ್ ಗಳಾಗಿದ್ದು, ಯುವಕರಿಗೆ ಉಗ್ರ ತರಬೇತಿ ಮತ್ತು ವಿಧ್ವಂಸಕ ಕೃತ್ಯಗಳ ಯೋಜನೆ ರೂಪಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com