ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ, ಬಿಜೆಪಿ ಸೇರಿದ ಸಚಿವ

ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಸಚಿವ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ, ಬಿಜೆಪಿ ಸೇರಿದ ಸಚಿವ
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ, ಬಿಜೆಪಿ ಸೇರಿದ ಸಚಿವ
Updated on: 
ಶಿಮ್ಲಾ: ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಸಚಿವ ಬಿಜೆಪಿ ಸೇರ್ಪಡೆಯಾಗಿದ್ದಾರೆ. 
ಮಾಜಿ ಟೆಲಿಕಾಂ ಸಚಿವ ಸುಖ್ ರಾಮ್ ಅವರ ಪುತ್ರ ಅನಿಲ್ ಶರ್ಮಾ ವೀರಭದ್ರ ಸಿಂಗ್ ಸಚಿವ ಸಂಪುಟದಲ್ಲಿ ಸಚಿವರಾಗಿದ್ದು ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶರ್ಮಾ ಸೇರ್ಪಡೆ ಬಗ್ಗೆ ನವದೆಹಲಿಯಲ್ಲಿ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಬಿಜೆಪಿ ವಕ್ತಾರ ಗಣೇಶ್ ದತ್ ತಿಳಿಸಿದ್ದಾರೆ. 
ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಆಸಕ್ತಿ ತೋರದೇ ಇರುವುದರಿಂದ ನಾನು ಸರ್ಕಾರ ಹಾಗೂ ಪಕ್ಷ ಎರಡನ್ನೂ ತೊರೆದಿದ್ದೇನೆ ಎಂದು ಮಾಧ್ಯಮಗಳಿಗೆ ಶರ್ಮಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com