ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಪಂಜಾಬ್ ರಾಜ್ಯದ ಗುರುದಾಸ್ ಪುರ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆ ಫ‌ಲಿತಾಂಶ ಭಾನುವಾರ ಪ್ರಕಟಗೊಂಡಿದ್ದು,ಆಡಳಿತಾರೂಢ ಕಾಂಗ್ರೆಸ್ ಜಯ ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಖರ್ 1,93,219 ಮತಗಳಿಂದ ಜಯ ಸಾಧಿಸಿದ್ದಾರೆ...
ಪಂಜಾಬ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಪಂಜಾಬ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಗುರುದಾಸ್ ಪುರ: ಪಂಜಾಬ್ ರಾಜ್ಯದ ಗುರುದಾಸ್ ಪುರ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆ ಫ‌ಲಿತಾಂಶ ಭಾನುವಾರ ಪ್ರಕಟಗೊಂಡಿದ್ದು,ಆಡಳಿತಾರೂಢ ಕಾಂಗ್ರೆಸ್ ಜಯ ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಖರ್ 1,93,219 ಮತಗಳಿಂದ ಜಯ ಸಾಧಿಸಿದ್ದಾರೆ. 
ಜಖರ್ ಬಿಜೆಪಿ ಅಭ್ಯರ್ಥಿ ಸ್ವರನ್ ಸಲರಿಯಾ ಅವರನ್ನು ಸೋಲಿಸಿದ್ದಾರೆ. 
ಬಿಜೆಪಿ ಸಂಸದ ಚಿತ್ರನಟ ವಿನೋದ್‌ ಖನ್ನಾ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು, ಆಪ್‌ 3 ನೇ ಸ್ಥಾನ ಪಡೆದುಕೊಂಡಿದೆ. 
12 ಸುತ್ತುಗಳ ಮತ ಎಣಿಕೆ ನಂತರ ಎಲ್ಲಾ 9 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಸುನಿಲ್ ಜಖರ್ , ಭಾರೀ ಮತಗಳಿಂದ ಗೆಲ್ಲಿಸಿದ ಮತದಾರರನ್ನು ಮತ್ತು ಬೆಂಬಲಿಸಿದ ಪಕ್ಷದ ಮುಖಂಡರಿಗೆ ಧನ್ಯವಾದ ಹೇಳಿದ್ದಾರೆ.
ಈ ಗೆಲುವಿನಿಂದ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ನಾಯಕತ್ವದ ಮೇಲೆ ಜನತೆಗೆ ನಂಬಿಕೆಯಿದೆ ಎಂಬುದು ಸಾಬೀತಾಗಿದೆ. ಇದು ಕಾಂಗ್ರೆಸ್ ಮತ್ತು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಗೆಲುವು ಎಂದು ಜಖರ್ ಖುಷಿಯಿಂದ ಹೇಳಿಕೊಂಡಿದ್ದಾರೆ.
ಪಂಜಾಬ್‌ನಾದ್ಯಂತ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಭಾರೀ ಸಂಭ್ರಮಾಚಾರಣೆಯಲ್ಲಿ ತೊಡಗಿದ್ದಾರೆ. 
ಈ ಮಧ್ಯೆ ಕೇರಳದ ವೆಂಗರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತಾ ರೂಢ ಎಡಪಕ್ಷ ಮತ್ತು ಬಿಜೆಪಿ ಮುಖಭಂಗ ಅನುಭವಿಸಿದ್ದು ಯುಡಿಎಫ್ ಮೈತ್ರಿಕೂಟ ಬೆಂಬಲಿತ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ನ ಅಭ್ಯರ್ಥಿ ಕೆಎನ್‌ಎ ಖಾದರ್‌  23,310 ಮತಗಳ ಅಂತರದಿಂದ  ಜಯಭೇರಿ ಬಾರಿಸಿದ್ದಾರೆ. ಎಡಪಕ್ಷ 2 ನೇ ಸ್ಥಾನ ಪಡೆದರೆ, ಎಸ್‌ಡಿಪಿಐ 3 ನೇ ಸ್ಥಾನ ಪಡೆದುಕೊಂಡಿದ್ದು , ನಾಲ್ಕನೇ ಸ್ಥಾನದಲ್ಲಿರುವ ಬಿಜೆಪಿ ಠೇವಣಿ ಕಳೆದುಕೊಂಡಿದೆ. 
ಐಎಎಮ್‌ಎಲ್‌ ನಾಯಕ ಪಿ.ಕೆ.ಕುನ್ಹಕುಟ್ಟಿ ಅವರು ಮಲ್ಲಪ್ಪುರಂ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ಸಲುವಾಗಿ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರ ತೆರವಾಗಿ ಉಪಚುನಾವಣೆ ನಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com