ಗಂಗಾ ನದಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ: ಉ.ಪ್ರ. ಉತ್ತರಾಖಂಡ್, ಕೇಂದ್ರಕ್ಕೆ ಎನ್ ಜಿಟಿ

ಗಂಗಾ ನದಿಯನ್ನು ಸ್ವಚ್ಛಗೊಳಿಸುವುದಕ್ಕೆ ನೀಡಿದ್ದ ನಿರ್ದೇಶವನ್ನು ಪಾಲಿಸಲು ಯಾವ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಉತ್ತರ ಪ್ರದೇಶ, ಉತ್ತರಾಖಂಡ್ ಹಾಗೂ ಕೇಂದ್ರ ಸರ್ಕಾರಕ್ಕೆ
ಗಂಗಾ ನದಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಎನ್ ಜಿಟಿ ಸೂಚನೆ
ಗಂಗಾ ನದಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಎನ್ ಜಿಟಿ ಸೂಚನೆ
ನವದೆಹಲಿ: ಗಂಗಾ ನದಿಯನ್ನು ಸ್ವಚ್ಛಗೊಳಿಸುವುದಕ್ಕೆ ನೀಡಿದ್ದ ನಿರ್ದೇಶವನ್ನು ಪಾಲಿಸಲು ಯಾವ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಉತ್ತರ ಪ್ರದೇಶ, ಉತ್ತರಾಖಂಡ್ ಹಾಗೂ ಕೇಂದ್ರ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸೂಚನೆ ನೀಡಿದೆ. 
ಹರಿದ್ವಾರ ಹಾಗೂ ಉನ್ನೌ ನಡುವಿನ 100 ಮೀಟರ್ ಪ್ರದೇಶವನ್ನು ನೋ ಡೆವಲ್ಪ್ಮೆಂಟ್ ಜೋನ್ ಎಂದು ಘೋಷಿಸಿ, ಗೋಮುಖ ಹಾಗೂ ಉನ್ನೌ ನಡುವಿನ 500 ಮೀಟರ್ ಪ್ರದೇಶದಲ್ಲಿ ಕಸ, ತ್ಯಾಜ್ಯಗಳನ್ನು ಸುರಿಯದಂತೆ ಕ್ರಮ ಕೈಗೊಳ್ಳಬೇಕೆಂದು ಈ ಹಿಂದೆ ಹಸಿರು ನ್ಯಾಯಮಂಡಳಿ ಆದೇಶ ನೀಡಿತ್ತು.
ಗಂಗಾ ನದಿ ಸ್ವಚ್ಛಗೊಳಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡುವಂತೆ ನ್ಯಾ.ಸ್ವತಂತ್ರ ಕುಮಾರ್ ನೇತೃತ್ವದ ಎನ್ ಜಿಟಿ ಈಗ ಕೇಂದ್ರ ಸರ್ಕಾರ, ಉತ್ತರ ಪ್ರದೇಶ, ಉತ್ತರಾಖಂಡ್ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಖಾನ್ಪುರ ಹಾಗೂ ಉತ್ತರ ಪ್ರದೇಶ ಗಡಿಯವರೆಗೆ 2 ನೇ ಹಂತದಲ್ಲಿ ಗಂಗಾ ನದಿ ಸ್ವಚ್ಛತೆಗೆ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಪಟ್ಟವರಿಗೆ ಸಲಹೆಯನ್ನೂ ಕೇಳಿದ್ದು, ಅ.24 ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com