ಆರುಷಿ ಕೊಲೆ ಪ್ರಕರಣ: 4 ವರ್ಷಗಳ ನಂತರ ತಲ್ವಾರ್ ದಂಪತಿ ಜೈಲಿನಿಂದ ಬಿಡುಗಡೆ

ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಈಗ....
ರಾಜೇಶ್, ನೂಪುರ್ ತಲ್ವಾರ್
ರಾಜೇಶ್, ನೂಪುರ್ ತಲ್ವಾರ್
Updated on
ಲಖನೌ: ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಈಗ ಖುಲಾಸೆಗೊಂಡಿರುವ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿ ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ಜೋಡಿ ಕೊಲೆ ಪ್ರರಕರಣದಲ್ಲಿ ದಂತ ವೈದ್ಯ ದಂಪತಿಯನ್ನು ಖುಲಾಸೆಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ರಾಜೇಶ್ ಮತ್ತು ನೂಪುರ್ ಇಬ್ಬರು ಬ್ಯಾಗ್ ನೊಂದಿಗೆ ಪೊಲೀಸ್ ಭದ್ರತೆಯಲ್ಲಿ ಜೈಲಿನಿಂದ ಮನೆಗೆ ತೆರಳಿದರು.
ಜೋಡಿ ಕೊಲಿ ಪ್ರಕರಣದಲ್ಲಿ ತಲ್ವಾರ್ ದಂಪತಿ ತಪ್ಪಿತಸ್ಥರು ಎಂದು ಸಿಬಿಐ ಕೋರ್ಟ್ ನವೆಂಬರ್ 2013ರಲ್ಲಿ ತೀರ್ಪು ನೀಡಿದ ನಂತರ ಆರೋಪಿಗಳು ಅಂದಿನಿಂದ ದಾಸ್ನಾ ಜೈಲಿನಲ್ಲಿದ್ದರು.
ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ರಾಜೇಶ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅಲ್ಲದೆ ರಾಜೇಶ್‌ ಮತ್ತು ನೂಪುರ್‌ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ರಾಜೇಶ್‌ ಮತ್ತು ನೂಪುರ್‌ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್‌ ಕೊಲೆಯ ಹೊಣೆಗಾರರಲ್ಲ ಎಂದು ನ್ಯಾಯಪೀಠ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com