ಜೈಲಿನಿಂದ ಬಿಡುಗಡೆಯಾದ ಬಳಿಕವೂ ಡಾ.ತಲ್ವಾರ್ ದಂಪತಿ 15 ದಿನಕ್ಕೊಮ್ಮೆ ಜೈಲಿಗೆ: ಅಧಿಕಾರಿಗಳು

ಪುತ್ರಿ ಆರುಷಿ ತಲ್ವಾರ್ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆಕೆಯ ಪೋಷಕರಾದ ದಂತ ವೈದ್ಯ ದಂಪತಿ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರು ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿವೆ...
ದಂತ ವೈದ್ಯ ದಂಪತಿ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್
ದಂತ ವೈದ್ಯ ದಂಪತಿ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್
ದಾಸ್ನಾ: ಪುತ್ರಿ ಆರುಷಿ ತಲ್ವಾರ್ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆಕೆಯ ಪೋಷಕರಾದ ದಂತ ವೈದ್ಯ ದಂಪತಿ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರು ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಹೈಕೋರ್ಟ್ ಆದೇಶ ಪ್ರತಿ ತಲುಪಿ ಕೆಲವು ಪ್ರಕ್ರಿಯೆಗಳು ನಡೆಯಬೇಕಿದ್ದ ಕಾರಣ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಬಿಡುಗಡೆ ತಡವಾಗಿತ್ತು. ಆದರೆ, ಬಿಡುಗಡೆ ಆದರೂ ಕೂಡ ಜೈಲಿನಲ್ಲಿರುವ ದಂತವೈದ್ಯ ವಿಭಾಗಕ್ಕೆ ಪ್ರತಿ 15 ದಿನಕ್ಕೊಮ್ಮೆ ಭೇಟಿ ನೀಡಿ ಕೈದಿಗಳಿಗೆ ದಂತ ಚಿಕಿತ್ಸೆ ನೀಡಲು ದಂಪತಿ ನಿರ್ಧರಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ಜೈಲು ಅಧಿಕಾರಿ ಡಿ. ಮೌರ್ಯ ಅವರು ಪ್ರತಿಕ್ರಿಯೆ ನೀಡಿದ್ದು, 2 ದಿನಗಳ ರಜೆ ಬಳಿಕ ಇಂದು ನ್ಯಾಯಾಲಯ ತನ್ನ ಕಾರ್ಯಗಳನ್ನು ಮುಂದುವರೆಸಲಿದೆ. ತಲ್ವಾರ್ ದಂಪತಿಗಳು ಇಂದು ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 

ಜೈಲಿನಲ್ಲಿ ಇದ್ದಷ್ಟು ದಿನ ದಂಪತಿಗಳಿಬ್ಬಲು ಕೈದಿಗಳಿಗೆ ಉಚಿತವಾಗಿ ದಂತ ವೈದ್ಯಕೀಯ ಚಿಕಿತ್ಸೆಗಳನ್ನು ನೀಡುತ್ತಿದ್ದರು. ಈ ವೇಳೆ ಸಂಭಾವನೆ ನೀಡಿದರು ಅವರು ತೆಗೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಅವರು ಆ ಸಂಭಾವನೆಯನ್ನು ತೆಗೆದುಕೊಂಡಿದ್ದೇ ಆಗಿದ್ದರೆ ರೂ. 49,500ರಷ್ಟು ನೀಡಬೇಕಿತ್ತು ಎಂದು ತಿಳಿಸಿದ್ದಾರೆ. 
ವೃತ್ತಿಯಲ್ಲಿ ದಂತವೈದ್ಯರಾಗಿರುವ ರಾಜೇಶ್‌ ಮತ್ತು ನೂಪುರ್ ತಲ್ವಾರ್‌ ಅವರ ನೊಯಿಡಾ ನಿವಾಸದಲ್ಲಿ 2008ರ ಮೇ 16ರಂದು ಅವರ ಪುತ್ರಿ ಆರುಷಿ ಶವ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಮನೆಯ ಕೆಲಸಗಾರ ಹೇಮರಾಜ್‌ ಶವ ಮನೆಯ ಚಾವಣಿಯಲ್ಲಿ ಪತ್ತೆಯಾಗಿತ್ತು. ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು.
ಆರುಷಿ ಮತ್ತು ಹೇಮರಾಜ್‌ ಅವರನ್ನು ತಲ್ವಾರ್‌ ದಂಪತಿ ಹತ್ಯೆ ಮಾಡಿದ್ದಾರೆ ಎಂದು 2013ರಲ್ಲಿ ಹೇಳಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಇಬ್ಬರಿಗೂ ಜೀವವಾಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾದಿರಿಸಿತ್ತು. 
ಇದರಂತೆ ಅ.12 ರಂದು ಮಹತ್ವದ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಯನ್ನು ಖುಲಾಸೆಗೊಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com