ನವದೆಹಲಿ: ಬಂಗಾಳ ಕೊಲ್ಲಿಯ ಕೇಂದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಸಮುದ್ರ ಮಟ್ಟದಿಂದ 5.8ಕಿ.ಮೀ ಮೇಲೆ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಮುನ್ನಚ್ಚೆರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡು ರಾಜ್ಯಗಳಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಉತ್ತರ ಆಂಧ್ರಪ್ರದೇಶದಲ್ಲಿ ಮುಂದಿನ 24 ಗಂಟೆಳಲ್ಲಿ ಹಾಗೂ ಒಡಿಶಾದಲ್ಲಿ ಅಕ್ಟೋಬರ್ 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
2014ರಲ್ಲೂ ಇದೆ ಸಮಯದಲ್ಲಿ ಹುಡ್ ಹುಡ್ ಚಂಡಮಾರುತದಿಂದಾಗಿ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು. ಈ ಮಳೆಯಿಂದಾಗಿ 81 ಮಂದಿ ಪ್ರಾಣ ಕಳೆದುಕೊಂಡಿದ್ದರು.