ಅಯೋಧ್ಯೆಯಲ್ಲಿ ಮೆಗಾ ದೀಪಾವಳಿ 2017 ಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯೋಜನೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ದೀಪಾವಳಿಯನ್ನು ಅಯೋಧ್ಯೆಯಲ್ಲಿ ಆಚರಣೆ ಮಾಡಲಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ದೀಪಾವಳಿಯನ್ನು ಅಯೋಧ್ಯೆಯಲ್ಲಿ ಆಚರಣೆ ಮಾಡಲಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿರುವುದಕ್ಕೂ ರಾಮಜನ್ಮಭೂಮಿ ವಿವಾದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 
ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಬೆಂಬಲಿಗರೊಂದಿಗೆ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಲಿದ್ದು, ಸಿದ್ಧತೆ ಭರದಿಂದ ಸಾಗಿದೆ. 2 ಲಕ್ಷ ದೀಪಗಳನ್ನು ಬೆಳಗುವ ಮೂಲಕ ದೀಪಾವಳಿ ಆಚರಣೆಯಲ್ಲಿ ಗಿನ್ನೀಸ್ ವಿಶ್ವ ದಾಖಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ರಾಮಾಯಣಕ್ಕೆ 10,000 ವರ್ಷಗಳ ಇತಿಹಾಸವಿದ್ದು ಅಯೋಧ್ಯೆ ರಾಮಾಯಣದ ಅವಿಭಾಜ್ಯ ಅಂಗ, ಅಯೋಧ್ಯೆ ನಮ್ಮ ಸಂಸ್ಕೃತಿಯ ಹೆಮ್ಮೆ, ರಾಮ ನಮಗೆ ಆದರ್ಶ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com