ಪಂಚಕುಲ ಹಿಂಸಾಚಾರ ಪ್ರಕರಣ: ಡೇರಾ ಸಿಎ, ಓರ್ವ ಪೊಲೀಸ್ ಸಿಬ್ಬಂದಿ ಬಂಧನ

ಅತ್ಯಾಚಾರಿ ಬಾಬಾ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಸಿಬಿಐ ವಿಶೇಷ ಕೋರ್ಟ್ ನಿಂದ ತಪ್ಪಿಸಿಕೊಳ್ಳಲು...
ಹಿಂಸಾಚಾರದ ವೇಳೆ ಕಾಣಿಸಿಕೊಂಡ ಹೊಗೆ (ಸಂಗ್ರಹ ಚಿತ್ರ)
ಹಿಂಸಾಚಾರದ ವೇಳೆ ಕಾಣಿಸಿಕೊಂಡ ಹೊಗೆ (ಸಂಗ್ರಹ ಚಿತ್ರ)
ಚಂಡೀಗಢ: ಅತ್ಯಾಚಾರಿ ಬಾಬಾ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಸಿಬಿಐ ವಿಶೇಷ ಕೋರ್ಟ್ ನಿಂದ ತಪ್ಪಿಸಿಕೊಳ್ಳಲು ಸಂಚು ರೂಪಿಸಿದ ಆರೋಪದ ಮೇಲೆ ಮಂಗಳವಾರ ಓರ್ವ ಪೊಲೀಸ್ ಸಿಬ್ಬಂದಿಯನ್ನು ಮಂಗಳವಾರ ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಇನ್ನು ಪಂಚಕುಲ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಡೇರಾ ಸಿಎಂ ಹಾಗೂ ಎಂಎಸ್ ಜಿ ಕಂಪನಿಯ ಸಿಇಒ ಸಿ.ಪಿ.ಅರೋರಾ ಅವರನ್ನು ಸಹ ಹರಿಯಾಣ ಪೊಲೀಸರ ವಿಶೇಷ ತನಿಖಾ ತಂಡ(ಎಸ್ಐಟಿ) ಇಂದು ಬಂಧಿಸಿದೆ.
ಪಂಚಕುಲ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಬಾಬಾ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಹಾಗೂ ಆಕೆಯ ಆಪ್ತ ಸುಖದೀಪ್ ಕೌರ್ ಅವರನ್ನು ಪಂಚಕುಲ ಕೋರ್ಟ್ ಅಕ್ಟೋಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ ನಂತರ ಪಂಚಕುಲದಲ್ಲಿ ನಡೆದ ಭಾರಿ ಹಿಂಸಾಚಾರ ಪ್ರಕರಣ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com