ಅಫ್ಘಾನಿಸ್ತಾನಕ್ಕೆ ಅಜಿತ್ ದೋವಲ್ ಭೇಟಿ: ಪ್ರಮುಖ ’ಕಾರ್ಯತಂತ್ರಗಳ’ ಬಗ್ಗೆ ಚರ್ಚೆ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದು, ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಮುಖ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಅಜಿತ್ ದೋವಲ್
ಅಜಿತ್ ದೋವಲ್
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದು, ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಮುಖ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ. 
ಕಾರ್ಯಸೂಚಿಯಲ್ಲಿರುವ ಅಂಶಗಳನ್ನು ಪೂರ್ಣಗೊಳಿಸುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ವೃದ್ಧಿಸುವುದರ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗಿನ ಮಾತುಕತೆಯ ವೇಳೆ ನಿರ್ಧರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದ್ದು, ಹೆಚ್ಚಿನ ವಿವರಣೆ ತಿಳಿದುಬಂದಿಲ್ಲ. .
ಸುದ್ದಿ ಮೂಲಗಳ ಪ್ರಕಾರ ಪಾಕಿಸ್ತಾನದಿಂದ ಉಂಟಾಗುತ್ತಿರುವ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಅಜಿತ್ ದೋವಲ್-ಅಫ್ಘಾನಿಸ್ತಾನದ ಉನ್ನತ ಅಧಿಕಾರಿಗಳ ನಡುವಿನ ವಿಸ್ತೃತ ಮಾತುಕತೆಯಲ್ಲಿ ಚರ್ಚಿಸಲಾಗಿದ್ದು, ಭಾರತ- ಅಫ್ಘಾನಿಸ್ತಾನದ ಭದ್ರತಾ ವಿಷಯಗಳ ಬಗ್ಗೆಯೂ ಮಾತುಕತೆ ನಡೆದಿದೆ. 
ಅಫ್ಘಾನಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಹನೀಫ್ ಅತ್ಮರ್ ಅವರೊಂದಿಗೂ ಅಜಿತ್ ದೋವಲ್ ಮಾತನಾಡಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com