ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್'ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಉಗ್ರರ ಗುಂಪೊಂದು ಗುಂಡಿನ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್'ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಉಗ್ರರ ಗುಂಪೊಂದು ಗುಂಡಿನ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. 
ಪುಲ್ವಾಮ ಜಿಲ್ಲೆ ವಿಶೇಷ ಪೊಲೀಸ್ ಅಧಿಕಾರಿ ಹಲೀಮ್ ಗುಜ್ಜರ್ ಹತ್ಯೆಗೀಡಾದ ಅಧಿಕಾರಿಯಾಗಿದ್ದಾರೆ. ಕಳೆದ ರಾತ್ರಿ ತ್ರಾಲ್ ನಲ್ಲಿರುವ ಗುಟ್ರೂ ಗ್ರಾಮದಲ್ಲಿರುವ ಅಧಿಕಾರಿಯ ಮನೆಗೆ ನುಗ್ಗಿರುವ ಉಗ್ರರ ಗುಂಪು ಏಕಾಏಕಿ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಅಧಿಕಾರಿಯನ್ನ ಹತ್ಯೆ ಮಾಡುತ್ತಿದ್ದಂತೆಯೇ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಇದೀಗ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com