ನನ್ನ ನಂಬಿಕೆಯನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ವಿಪಕ್ಷಗಳ ಟೀಕೆಗಳಿಗೆ ಸಿಎಂ ಯೋಗಿ ತಿರುಗೇಟು

ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತೀವ್ರ ಟೀಕೆಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನನ್ನ ನಂಬಿಕೆಗಳನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಗುರುವಾರ ಹೇಳಿದ್ದಾರೆ...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಅಯೋಧ್ಯೆ: ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತೀವ್ರ ಟೀಕೆಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನನ್ನ ನಂಬಿಕೆಗಳನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಗುರುವಾರ ಹೇಳಿದ್ದಾರೆ. 

ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ ಹಿನ್ನಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಟೀಕೆಗಳನ್ನು ಮಾಡುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ. 

ಅಯೋಧ್ಯೆಯಲ್ಲಿರುವ ರಾಮನಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿರುವ ಅವರು, ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ವೈಯಕ್ತಿಕ ನಂಬಿಕೆಯಾಗಿದೆ. ನನ್ನ ವೈಯಕ್ತಿಕ ನಂಬಿಗಳಲ್ಲಿ ವಿರೋಧ ಪಕ್ಷಗಳು ಮಧ್ಯೆ ಹೇಗೆ ಪ್ರವೇಶ ಮಾಡುತ್ತವೆ ಎಂದು ಪ್ರಶ್ನಿಸಿದ್ದಾರೆ. 

ಇದೇ ವೇಳೆ ಅಯೋಧ್ಯೆ ಭೇಟಿ ಕುರಿತಂತೆ ಕಾರಣ ನೀಡಿರುವ ಅವರು, ದೀಪಾವಳಿ ಹಿನ್ನಲೆಯಲ್ಲಿ ಅಯೋಧ್ಯೆಗೆ ಸಾವಿರಾರು ಭಕ್ತರು ಬರುತ್ತಿರುತ್ತಾರೆ. ಈ ಹಿನ್ನಲೆಯಲ್ಲಿ ಭದ್ರತೆಯನ್ನು ಸ್ವತಃ ಪರಿಶೀಲನೆ ನಡೆಸುವ ಸಲುವಾಗಿ ಭೇಟಿ ನೀಡಿದ್ದೇನೆ. ರಾಜ್ಯ ಪ್ರತಿ ಮೂಲೆಯನ್ನೂ ಅಭಿವೃದ್ಧಿಪಡಿಸುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ. 

ಶಾಂತಿ, ಭದ್ರತೆ ಹಾಗೂ ರಾಜ್ಯದ ಕಲ್ಯಾಣಕ್ಕಾಗಿ ರಾಮನ ಬಳಿ ಬೇಡಿಕೊಳ್ಳಲು ನಾನು ಅಯೋಧ್ಯೆಗೆ ಬಂದಿದ್ದೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com