ಜಮ್ಮು-ಕಾಶ್ಮೀರ: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು, ಅಲ್ಲಿಯೇ ಗಡಿಯಲ್ಲಿರುವ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು, ಅಲ್ಲಿಯೇ ಗಡಿಯಲ್ಲಿರುವ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದ ಗುರೇಜ್ ಸೆಕ್ಟರ್ ಗೆ ಭೇಟಿ ನೀಡಿದ್ದು, ಅಲ್ಲಿನ ಗಡಿ ನಿಯಂತ್ರಣ ರೇಖೆ ಎಲ್ ಒಸಿಯಲ್ಲಿರುವ ಸೇನಾ ಕ್ಯಾಂಪ್ ಗೆ ಭೇಟಿ ನೀಡಿ ಯೋಧರಿಗೆ ದೀಪಾವಳಿ ಹಬ್ಬದ  ಶುಭಕೋರಿದ್ದಾರೆ ಎಂದು ತಿಳಿದುಬಂದಿದೆ. ನರೇಂದ್ರ ಮೋದಿ ಅವರು 2ನೇ ಬಾರಿಗೆ ಕಾಶ್ಮೀರಕ್ಕೆ ಆಗಮಿಸಿ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ವೇಳೆ ಸೈನಿಕರಿಗೆ ಸಿಹಿ ಹಂಚಿ ಹಬ್ಬದ ಶುಭಾಶಯ ಕೋರಿದ್ದಾರೆ.
2014ರಲ್ಲಿ ಅಂದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿ ಯೋಧರಿಗೆ ಹಬ್ಬದ ಶುಭಾಶಯ ತಿಳಿಸಿದ್ದರು, ಇದೀಗ ಬರೊಬ್ಬರಿ 2  ವರ್ಷಗಳ ಬಳಿಕ ಮತ್ತೆ ಗಡಿಯಲ್ಲಿರುವ ಸೈನಿಕರ ಭೇಟಿ ಮಾಡಿ ಸೈನಿಕರಿಗೆ ಪ್ರಧಾನಿ ಮೋದಿ ಹಬ್ಬದ ಶುಭಕೋರಿದ್ದಾರೆ. 2015ರಲ್ಲಿ ಪಂಜಾಬ್ ನಲ್ಲಿರುವ ಭಾರತ-ಪಾಕಿಸ್ತಾನದ ಗಡಿ ಪ್ರದೇಶಕ್ಕೆ ತೆರಳಿ ಪ್ರಧಾನಿ ಮೋದಿ ದೀಪಾವಳಿ  ಆಚರಿಸಿಕೊಂಡಿದ್ದರು. 2016ರಲ್ಲಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಸೈನಿಕರನ್ನು ಭೇಟಿ ದೀಪಾವಳಿ ಆಚರಿಸಿಕೊಂಡಿದ್ದರು.
ಅಟ್ಠಾರಿ-ವಾಘಾ ಗಡಿಯಲ್ಲಿ ಸಿಹಿ ವಿತರಣೆ
ಇದೇ ವೇಳೆ ದೀಪಾವಳಿ ಹಬ್ಬದ ನಿಮಿತ್ತ ಭಾರತ ಮತ್ತು ಪಾಕಿಸ್ತಾನದ ಗಡಿ ಅಟ್ಠಾರಿ-ವಾಘಾ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೇನೆಯ ರೇಂಜರ್ ಗಳು ಪರಸ್ಪರ ಸಿಹಿ ವಿತರಣೆ ಮಾಡಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com