2014ರಲ್ಲಿ ಅಂದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿರಿಯ ನ್ಯಾಯವಾದಿ ರಂಜಿತ್ ಕುಮಾರ್ ಅವರನ್ನು ಸಾಲಿಸಿಟರ್ ಜನರಲ್ ಆಗಿ ನೇಮಕ ಮಾಡಲಾಗಿತ್ತು. ಪ್ರಮುಖ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದ ಪರ ವಾದ ಮಂಡಿಸುತ್ತಿದ್ದ ರಂಜಿತ್ ಕುಮಾರ್ ಅವರು, ಈ ಹಿಂದೆ ಕಾವೇರಿ ವಿವಾದ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.