ದೇಶ

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರೀನಗರದಲ್ಲಿ ಮತ್ತೆ ನಿರ್ಬಂಧ ಹೇರಿಕೆ

ಕಾಶ್ಮೀರದಲ್ಲಿ ಹೆಣ್ಣುಮಕ್ಕಳ ತಲೆಕೂದಲು ಕತ್ತರಿಸುವ ಘಟನೆಗಳನ್ನು ವಿರೋಧಿಸಿ ಕಾಶ್ಮೀರ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ...

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರೀನಗರದಲ್ಲಿ ಮತ್ತೆ ನಿರ್ಬಂಧ ಹೇರಿಕೆ
ಜಮ್ಮು-ಕಾಶ್ಮೀರ
Published On :
ಶ್ರೀನಗರ: ಕಾಶ್ಮೀರದಲ್ಲಿ ಹೆಣ್ಣುಮಕ್ಕಳ ತಲೆಕೂದಲು ಕತ್ತರಿಸುವ ಘಟನೆಗಳನ್ನು ವಿರೋಧಿಸಿ ಕಾಶ್ಮೀರ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರೀನಗರದಲ್ಲಿ ನಿರ್ಬಂಧ ವಿಧಿಸಿದ್ದಾರೆ. 
ನೌಹಟ್ಟಾ, ಎಂ.ಆರ್ ಗಂಜ್, ರಾಣಿವಾರಿ, ಖನ್ಯಾರ್, ಸಾಫಾ ಕಾದಲ್, ಮೈಸುಮಾ ಹಾಗೂ ಕ್ರಾಲ್ಖಡ್ ಗಳಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯರ ತಲೆ ಕೂದಲು ಕತ್ತರಿಸುವವರನ್ನು ಮಸೀದಿಯ ವಶಕ್ಕೆ ಒಪ್ಪಿಸಬೇಕೆಂದು ಪ್ರತ್ಯೇಕತಾವಾದಿಗಳು ಜನತೆಗೆ ಕರೆ ನೀಡಿದ್ದಾರೆ. 
ಅಧಿಕಾರಿಗಳು ನಿರ್ಬಂಧ ವಿಧಿಸಿರುವುದರಿಂದ ಬಹುತೇಕ ಎಲ್ಲಾ ಸಾರ್ವಜನಿಕ ಸಾರಿಗೆ, ಶಿಕ್ಷಣ ಸಂಸ್ಥೆ, ಅಂಗಡಿಗಳು ಬಂಡ್ ಆಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.