ಲಖನೌ: ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ತನಿಖೆಗೆ ಆದೇಶಿಸಿದ್ದಾರೆಂದು ಸೋಮವಾರ ತಿಳಿಸಿದ್ದಾರೆ.