ಜಿಎಸ್‌ಟಿ ಅಂದ್ರೆ 'ಗಬ್ಬರ್ ಸಿಂಗ್ ಟ್ಯಾಕ್ಸ್': ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಅಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ...
Published on
ಗಾಂಧಿನಗರ (ಗುಜರಾತ್): ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಅಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. 
ಗಾಂಧಿನಗರದಲ್ಲಿ ನಡೆದ ನವಸರ್ಜನ್ ಜನದೇಶ್ ಮಹಾಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಜಿಎಸ್‍ಟಿಯಲ್ಲಿ ಕೆಲ ಸುಧಾರಣೆಗಳನ್ನು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. 
ಅಲ್ಲದೆ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಬಯಸಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರವು ಗಬ್ಬರ್ ಸಿಂಗ್ ತೆರಿಗೆಯನ್ನು ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದರು. 
ಪ್ರಧಾನಿ ಮೋದಿ ಅವರ ವಿರುದ್ಧ ಟೀಕೆ ಪ್ರಹಾರವನ್ನು ಮುಂದುವರೆಸಿದ ರಾಹುಲ್ ಗಾಂಧಿ ಚೀನಾ ಜತೆಗೆ ಉತ್ತಮ ಸಂಬಂಧ ವೃದ್ಧಿಯೊಂದಿಗೆ ಬೆಳವಣಿಗೆ ಸಾಧಿಸುತ್ತೇವೆ ಎಂದು ಹೇಳಿದ್ದ ಸರ್ಕಾರ ಎಂದು ಜನರಿಗೆ ಚೀನಾ ಉತ್ಪನ್ನಗಳನ್ನು ನಿಷೇಧಿಸುವಂತೆ ಹೇಳುತ್ತಿದೆ. ಯುವ ಜನತೆಯ ಬಳಿ ಇರುವ ಮೊಬೈಲ್ ಗಳೆಲ್ಲಾ ಮೇಡ್ ಇನ್ ಚೀನಾ ಉತ್ಪನ್ನಗಳು ನಾವು ಇಲ್ಲಿ ಸೆಲ್ಫಿ ತೆಗೆದುಕೊಂಡರೇ ಅಲ್ಲಿ ಚೀನಾ ಯುವಕರಿಗೆ ಕೆಲಸ ಸಿಗುತ್ತದೆ ಎಂದು ಹೇಳಿದರು.
ದೇಶದಲ್ಲಿ 30 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿಗಳಿದ್ದಾರೆ. ದಿನಂ ಪ್ರತಿ 30 ಸಾವಿರಕ್ಕೂ ಹೆಚ್ಚು ಯುವ ಜನತೆ ಕೆಲಸಗಳನ್ನು ಹುಡುಕುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಕೇವಲ 450 ಕೆಲಸಗಳನ್ನು ಮಾತ್ರ ಒದಗಿಸುತ್ತಿದೆ ಎಂದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com