ಗುಜರಾತ್ ಬಿಟ್ಟು ಹಿಮಾಚಲ ಪ್ರದೇಶದ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದಕ್ಕೆ ಆಯೋಗದಿಂದ ಸ್ಪಷ್ಟನೆ

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕದ ಜೊತೆ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡದೇ ಇರುವ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಲಾಗುತ್ತಿದ್ದು...
ಚುನಾವಣಾ ಆಯೋಗ
ಚುನಾವಣಾ ಆಯೋಗ
ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕದ ಜೊತೆ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡದೇ ಇರುವ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಲಾಗುತ್ತಿದ್ದು, ಇದಕ್ಕೆ ಆಯೋಗದ ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ.
ಹಿಮಾಚಲ ಪ್ರದೇಶ ಚುನಾವಣೆಯ ದಿನಾಂಕವನ್ನು ಗುಜರಾತ್ ಗಿಂತ ಮೊದಲು ಪ್ರಕಟಿಸಲು ಹವಾಮಾನ ಸೇರಿದಂತೆ ಹಲವು ಅಂಶಗಳು ಕಾರಣ ಎಂದು ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತವಾಗುವ ಸಾಧ್ಯತೆಗಳಿರುವುದರಿಂದ ನವೆಂಬರ್ ಮಧ್ಯ ದಿನಾಂಕಕ್ಕೂ ಮುನ್ನ ಚುನಾವಣೆ ನಡೆಸಬೇಕೆಂದು ರಾಜ್ಯಾಡಳಿತ ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು ಈ ಹಿನ್ನೆಲೆಯಲ್ಲಿ ಗುಜರಾತ್ ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶ ಚುನಾವಣೆಯ ದಿನಾಂಕವನ್ನು ಘೋಷಿಸಿರುವುದಾಗಿ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com