ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಮಂಗಳವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ನವದೆಹಲಿ: ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಮಂಗಳವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಆಫ್ಘಾನಿಸ್ತಾನದಲ್ಲಿನ ಆಂತರಿಕ ಹಿಂಸಾಚಾರ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಅಶ್ರಫ್ ಘನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಿದ್ದು, ಉಭಯ ದೇಶಗಳೂ ಒಟ್ಟುಗೂಡಿ ಭಯೋತ್ಪಾದನೆಯನ್ನು ಎದುರಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಅವರನ್ನು ಮಾತ್ರವಲ್ಲದೇ ಘನಿ, ರಾಷ್ಟ್ರಪತಿ ಕೋವಿಂದ್ ಅವರನ್ನು ಮಾಡಿ ಚರ್ಚಿಸಲಿದ್ದು, ಬಳಿಕ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.