ದೇಶ

ಕಾಂಗ್ರೆಸ್ ನಂ.1 ನಾಟಕೀಯ ಪಕ್ಷ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ಕಾಂಗ್ರೆಸ್ ನಂ.1 ನಾಟಕೀಯ ಪಕ್ಷ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
Published On :
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದರ್ಥ ಎಂದು ಹೇಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಂ.1 ನಾಟಕೀಯ ಪಕ್ಷ ಎಂದು ಸೋಮವಾರ ಹೇಳಿದೆ. 
ರಾಹುಲ್ ಗಾಂಧಿಯವರ ಹೇಳಿಕೆ ಕುರಿತಂತೆ ಸುದ್ದಿಗೋಷ್ಟಿಯೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ರಾಹುಲ್ ಗಾಂಧಿಯವರ ಕಾಂಗ್ರೆಸ್ 'ನಂಬರ್ ಒನ್ ಡ್ರಾಮೇಜಾಬ್ (ನಾಟಕೀಯ) ಪಕ್ಷ ಎಂದು ಟಾಂಗ್ ನೀಡಿದ್ದಾರೆ. 
ಸಾಕಷ್ಟು ಸಿನಿಮಾಗಳಿಗೆ ನಂ.1 ಟೈಟಲ್ ಗಳನ್ನು ನೀಡಲಾಗಿರುತ್ತದೆ. ಜೋಡಿ ನಂ.1, ದೋಸ್ಟ್ ನಂ.1 ಮತ್ತು ಆಂಟಿ ನಂ.1 ಎಂದು ನೀಡಿರುತ್ತಾರೆ. ಇಂದು ನಾನು ಒಂದು ಹೆಸರನ್ನು ನೀಡುತ್ತೇನೆ. ಕಾಂಗ್ರೆಸ್-ನಂ.1 ಡ್ರಾಮೇಬಾಜ್ ಪಕ್ಷ ಎಂದು. ಸಂಪೂರ್ಣ ಹೊಣೆಗಾರಿಕೆಯೊಂದಿಗೆ ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಹೇಳಿಕೆನೀಡಿದ್ದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಬಯಸಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರವು ಗಬ್ಬರ್ ಸಿಂಗ್ ತೆರಿಗೆಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.