ಕಾಶ್ಮೀರ ಮಾತುಕತೆಗೆ ಕೇಂದ್ರ ಪ್ರತಿನಿಧಿಯ ನೇಮಕದಿಂದ ಸೇನಾ ಕಾರ್ಯಾಚರಣೆಗೆ ಅಡ್ಡಿ ಇಲ್ಲ: ಸೇನಾ ಮುಖ್ಯಸ್ಥರು

ಕಾಶ್ಮೀರದ ಸಮಸ್ಯೆ ಕುರಿತು ಮಾತುಕತೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಪ್ರತಿನಿಧಿಯನ್ನು ನೇಮಕ ಮಾಡಿರುವುದು ಸೇನಾ ಕಾರ್ಯಾಚರಣೆಗಳಿಗೆ ಅಡ್ಡಿ ಉಂಟುಮಾಡುವುದಿಲ್ಲ ಎಂದು ಸೇನಾ ಮುಖ್ಯಸ್ಥರು...
ಬಿಪಿನ್ ರಾವತ್
ಬಿಪಿನ್ ರಾವತ್
ನವದೆಹಲಿ: ಕಾಶ್ಮೀರದ ಸಮಸ್ಯೆ ಕುರಿತು ಮಾತುಕತೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಪ್ರತಿನಿಧಿಯನ್ನು ನೇಮಕ ಮಾಡಿರುವುದು ಸೇನಾ ಕಾರ್ಯಾಚರಣೆಗಳಿಗೆ ಅಡ್ಡಿ ಉಂಟುಮಾಡುವುದಿಲ್ಲ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. 
ಕೇಂದ್ರ ಸರ್ಕಾರ ದಿನೇಶ್ವರ್ ಶರ್ಮಾ ಅವರನ್ನು ಕಾಶ್ಮೀರದ ಪ್ರತ್ಯೇಕತಾವಾದಿಗಳೊಂದಿಗೆ ಹಾಗೂ ರಾಜಕಾರಣಿಗಳೊಂದಿಗೆ ಮಾತನಾಡಲು ತನ್ನ ವಿಶೇಶ ಪ್ರತಿನಿಧಿಯನ್ನಾಗಿ ನೇಮಕ ಮಾಡಿದೆ. ಈ ಬಗ್ಗೆ ಸೇನಾ ಮುಖ್ಯಸ್ಥ ರಾವತ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ತನ್ನ ಪ್ರತಿನಿಧಿಯನ್ನು ನೇಮಕ ಮಾಡಿದೆ. ಅವರಿಗೆ ಕೆಲಸ ಮಾಡಲು ಒಂದಷ್ಟು ಸಮಯ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 
ಇದೇ ವೇಳೆ, ಜಮ್ಮು-ಕಾಶ್ಮೀರದ ಪರಿಸ್ಥಿತಿ ಉತ್ತಮವಾಗುತ್ತಿದೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com