ನವದೆಹಲಿ: ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡಲು ನೀಡಲಾಗಿದ್ದ ಗಡುವನ್ನು ಮಾರ್ಚ್ 31, 2018ರ ವರೆಗೆ ವಿಸ್ತರಣೆ ಮಾಡವುದಾಗಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಲಿಂಕ್ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿತ್ತು. ಆದರೆ ಈಗ ಅದನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ತಿಳಿಸಿದೆ.
ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ನಿಯಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ ಗೆ ಈ ವಿಷಯ ತಿಳಿಸಿದ್ದಾರೆ.