ತ್ರಾಲ್ ನಲ್ಲಿ ಹಿಜ್ಬುಲ್ ಉಗ್ರ ಅರಿಜೂ ಬಶೀರ್ ಬಂಧನ

ಕಾಶ್ಮೀರದ ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ನ ಪ್ರಮುಖ ಉಗ್ರ ಅರಿಜೂ ಬಶೀರ್ ನನ್ನು ಮಂಗಳವಾರ ಭದ್ರತಾ ಪಡೆಗಳು ಬಂಧಿಸಿವೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಾಶ್ಮೀರದ ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ನ ಪ್ರಮುಖ ಉಗ್ರ ಅರಿಜೂ ಬಶೀರ್ ನನ್ನು ಮಂಗಳವಾರ ಭದ್ರತಾ ಪಡೆಗಳು ಬಂಧಿಸಿವೆ ಎಂದು ತಿಳಿದುಬಂದಿದೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ ಮತ್ತು ಸಂಘಟನೆಯಲ್ಲಿ ಸಕ್ರಿಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರಿಜೂ ಬಶೀರ್ ನನ್ನು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆಗಳು ತ್ರಾಲ್ ನಲ್ಲಿ ಜಂಟಿ  ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಎನ್ ಐಎ ಅಧಿಕಾರಿಗಳು ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇರೆಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ನ ಪುತ್ರ ಸೈಯ್ಯದ್ ಶಹೀದ್ ಯೂಸುಫ್  ನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಉಗ್ರ ಬಶೀರ್ ನನ್ನೂ ಕೂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಬಶೀರ್ ಬಂಧನದ ಬೆನ್ನಲ್ಲೇ ಕಾಶ್ಮೀರದಾದ್ಯಂತ ಭದ್ರತಾ ಪಡೆಗಳು ಅಲರ್ಟ್ ಘೋಷಣೆ ಮಾಡಿದ್ದು, ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com