ಗುಜರಾತ್ ಕೋರ್ಟ್ ಆದೇಶ ಹಿನ್ನಲೆ: ಶರಣಾಗಲು ಸಿದ್ಧ ಎಂದ ಹಾರ್ದಿಕ್ ಪಟೇಲ್

ಪಟೇಲ್ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡುವಂತೆ ಆಗ್ರಹಿಸಿ ಗುಜರಾತ್ ನಲ್ಲಿ ವ್ಯಾಪಕ ಪ್ರತಿಭಟನೆ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ತಾವು ಶರಣಾಗತಿಗೆ ಸಿದ್ಧ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅಹ್ಮದಾಬಾದ್: ಪಟೇಲ್ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡುವಂತೆ ಆಗ್ರಹಿಸಿ ಗುಜರಾತ್ ನಲ್ಲಿ ವ್ಯಾಪಕ ಪ್ರತಿಭಟನೆ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ತಾವು ಶರಣಾಗತಿಗೆ ಸಿದ್ಧ ಎಂದು ಹೇಳಿದ್ದಾರೆ.
ಗುಜರಾತ್ ನಲ್ಲಿ ಪಟೇಲ್ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಮತ್ತು ತಂಡದ ವಿರುದ್ಧ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಈ ಹಿಂದೆ  ನ್ಯಾಯಾಲಯ ಕೂಡ ಆದೇಶ ನೀಡಿತ್ತು. ಈ ಆದೇಶದ ಬೆನ್ನಲ್ಲೇ ಗುಜರಾತ್ ಪೊಲೀಸರು ವಾರಂಟ್ ಜಾರಿ ಮಾಡಿರುವ ಹಿನ್ನಲೆಯಲ್ಲಿ ಹಾರ್ದಿಕ್ ಪಟೇಲ್ ತಾವು ಶರಣಾಗತಿಗೆ ಸಿದ್ಧ ಎಂದು ಹೇಳಿದ್ದಾರೆ.
ಈ ಬಗ್ಗೆ ಗುಜರಾತ್ ನ ಮೆಹ್ಸಾನಾ ಜಿಲ್ಲೆಯಲ್ಲಿ ಮಾತನಾಡಿದ ಹಾರ್ದಿಕ್ ಪಟೇಲ್, ನನ್ನ ಹೋರಾಟ ಯಾವುದೇ ಕಾನೂನು ಬಾಹಿರವಾಗಿ ನಡೆಯುತ್ತಿಲ್ಲ. ನ್ಯಾಯಯುತವಾಗಿ ನಮ್ಮ ಸಮುದಾಯಕ್ಕೆ ಬರಬೇಕಿರುವ ಹಕ್ಕನ್ನು ಮಾತ್ರ  ಕೇಳುತ್ತಿದ್ದೇನೆ. ನನ್ನ ಹೋರಾಟ ನಿಲ್ಲಿಸಲು ಸಾಧ್ಯವೇ ಇಲ್ಲ. ನಮಗೆ ನ್ಯಾಯ ಸಿಗುವವರೆಗೂ ನಾನು ಹೋರಾಡುತ್ತನೆ. ನನ್ನ ಹೋರಾಟ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿದ್ದು, ಇದಕ್ಕೆ ನಾನು ಹೆದರುವುದಿಲ್ಲ. ಒಂದು ವೇಳೆ  ಪೊಲೀಸರಿಗೆ ನನ್ನ ವಿಚಾರಣೆ ಅಗತ್ಯವಿದ್ದರೆ ನಾನೇ ಅವರ ಮುಂದೆ ಹೋಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಹಾರ್ದಿಕ್ ಪಟೇಲ್ ಮತ್ತು ಅವರ ತಂಡ ನಡೆಸುತ್ತಿದ್ದ ಪಾಟಿದಾರ್ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಹಲವರಿಗೆ ಗಾಯಗಳಾಗಿತ್ತು. ಗುಜರಾತ್ ನಲ್ಲಿ ಹಲವು ಪ್ರದೇಶಗಳು ಇದರಿಂಗಾ  ಪ್ರಕ್ಷುಬ್ದಗೊಂಡಿದ್ದವು. ಈ ಎಲ್ಲ ಪ್ರಕರಣಗಳ ಸಂಬಂಧ ಹಾರ್ದಿಕ್ ಪಟೇಲ್ ಮತ್ತು ಆತನ ತಂಡದ ವಿರುದ್ಧ ಪೊಲೀಸ್ ಠಾಣೆ ಮತ್ತು ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com